ಲೋಕಾಯುಕ್ತ ಸಂಸ್ಥೆಗೆ ಶಾಸಕರ ಆಸ್ತಿ ವಿವರ ಸಲ್ಲಿಸಲು ಜೂ.30 ಕಡೇ ದಿನ

ಈ ಸುದ್ದಿಯನ್ನು ಶೇರ್ ಮಾಡಿ

Karnataka-lokayukta
ಬೆಂಗಳೂರು, ಏ.27-ರಾಜ್ಯ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಲು ಜೂ.30 ಕಡೇ ದಿನವಾಗಿದೆ. ಕಳೆದ 2017-18ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ವಿಧಾನಮಂಡಲದ ಪ್ರತಿಯೊಬ್ಬ ಸದಸ್ಯರೂ ನಿಗದಿತ ನಮೂನೆಯಲ್ಲಿ ಆಸ್ತಿ ವಿವರವನ್ನು ಲೋಕಾಯುಕ್ತ ಸಲ್ಲಿಸಬೇಕಾಗಿದೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಕಲಂ 22ರಡಿಯಲ್ಲಿ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಶಾಸಕರು ಸಲ್ಲಿಸುವ ಬಗ್ಗೆ ವಿಧಾನಸಭೆ ಕಾರ್ಯದರ್ಶಿಗೆ ಕರ್ನಾಟಕ ಲೋಕಾಯುಕ್ತ ನಿಬಂಧಕರು ಪತ್ರ ಬರೆದಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪತ್ರವನ್ನು ಆಧರಿಸಿ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಜೂ.30ರೊಳಗೆ ವಿಧಾನಮಂಡಲ ಸದಸ್ಯರು ಆಸ್ತಿ ವಿವರವನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸುವಂತೆ ಕೋರಿದ್ದಾರೆ. ಸರ್ಕಾರಿ ನೌಕರರಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರರು ತಮ್ಮ ಮತ್ತು ತಮ್ಮ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಪ್ರತಿ ವರ್ಷದ ಜೂ.30ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ.

Facebook Comments

Sri Raghav

Admin