ವಕೀಲರು ವಾದ ಮಂಡಿಸುವಲ್ಲಿ ವಿಫಲ : ಶೋಭಾ

ಈ ಸುದ್ದಿಯನ್ನು ಶೇರ್ ಮಾಡಿ

shobhakarandlaje

ಕಡೂರು, ಸೆ.22- ಸುಪ್ರೀಂಕೋರ್ಟ್‍ನಲ್ಲಿ ನಮ್ಮ ವಕೀಲರು ವಾದ ಮಂಡಿಸುವಲ್ಲಿ ವಿಫಲವಾದ ಕಾರಣ ಕಾವೇರಿ ವಿಷಯದಲ್ಲಿ ಸಂಕಷ್ಟ ಎದುರಾಗಿದೆ ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.ಎಪಿಎಂಸಿ ಆವರಣದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರಾವರಿ ವಿಷಯದಲ್ಲಿ ರಾಜಕಾರಣ ಬೇಡ, ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗಾಗಿ ಇದುವರೆಗೂ ಹಣ ನೀಡಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲಾ ರೀತಿಯ ಅನುದಾನ ನೀಡಿದೆ ಎಂದರು.
ಶಾಸಕ ಸಿ.ಟಿ. ರವಿ ಮಾತನಾಡಿ, ಜಿಲ್ಲೆಯಲ್ಲಿ 5 ನದಿಗಳು ಹುಟ್ಟಿದರೂ ಯಾವುದೇ ನೀರಾವರಿ ಯೋಜನೆಗಳಿಲ್ಲ. ಕುಡಿಯಲು ನೀರಿಲ್ಲ, ಮುಂದಿನ ಪರಿಸ್ಥಿತಿ ಭಯಾನಕವಾಗಿದೆ. ಮುಂದೆ ಮಳೆ ಬಾರದೇ ಇದ್ದರೆ ಬೇಸಿಗೆಯಲ್ಲಿ ಹೇಗೆ ಎಂಬಂತಾಗಿದೆ. ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕಿದೆ ಎಂದು ಹೇಳಿದರು. ಎಲ್ಲಾ ಕಡೆ ಗೋಶಾಲೆ ಪ್ರಾರಂಭಿಸಬೇಕಿದೆ. ರೈತರು ಆತ್ಮಹತ್ಯೆಗೆ ದಾರಿ ತುಳಿಯುವ ಮುನ್ನ ಸಾಲ ಮನ್ನಾ ಮಾಡಬೇಕಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದು ತಿಳಿಸಿದರು. ಜಿಪಂ ಅಧ್ಯಕ್ಷೆ ಚೈತ್ರಶ್ರೀ ವಿಧಾನ ಪರಿಷತ್ ಸದಸ್ಯ ಪ್ರಾಶೇಣ್, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ರಾಮಸ್ವಾಮಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕರಾದ ವೈ.ಸಿ. ವಿಶ್ವನಾಥ್, ಕುಮಾರಸ್ವಾಮಿ, ಬಿ.ಎಸ್. ಸುರೇಶ್, ಎಂ.ಹೆಚ್. ಭೈೂೀಜೇಗೌಡ, ಕಲ್ಮುರುಡಪ್ಪ, ರೇಖಾ ಹುಲಿಯಪ್ಪಗೌಡ, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷೆ ಸವಿತಾ ಸತ್ಯನಾರಾಯಣ್, ಬೀರೂರು ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್, ಬಿಜೆಪಿ ಮಾಜಿ ತಾಲ್ಲೂಕು ಅಧ್ಯಕ್ಷ ಕೆ.ಹೆಚ್. ಶಂಕರ್ ಮುಂತಾದವರು ಉಪಸ್ಥಿತರಿದ್ದರು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin