ವರುಣಾದಲ್ಲಿ ವಿಜಯೇಂದ್ರಗೆ ಟಿಕೆಟ್ ಕೈತಪ್ಪಲು ಸಿದ್ದರಾಮಯ್ಯ ಕಾರಣ : ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-and-Siddaramaia

ಮೈಸೂರು,ಏ.28-ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರಗೆ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಗಂಭೀರ ಆರೋಪ ಮಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇದಕ್ಕಾಗಿ ಯಾರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬುದು ತಮಗೆ ತಿಳಿದಿದೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸಿದ್ದರಾಮಯ್ಯ ಟಿಕೆಟ್ ತಪ್ಪಿಸುವ ಮೂಲಕ ತಮ್ಮ ಮಗ ಯತೀಂದ್ರರನ್ನು ಸೇಫ್ ಮಾಡಿದ್ದಾರೆ ಎಂದು ದೂರಿದರು.

ತಮ್ಮ ಮಗ ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸದಂತೆ ಸಿದ್ದರಾಮಯ್ಯ ನೋಡಿಕೊಂಡಿದ್ದಾರೆ. ಅದಕ್ಕಾಗಿ ಯಾರೊಂದಿಗೆ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಮಾರ್ಮಿಕವಾಗಿ ನುಡಿದರು. ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಬೋಗಸ್ ಎಂದು ಟೀಕಿಸಿರುವ ಕುಮಾರಸ್ವಾಮಿ, ಅವರ ಪ್ರಣಾಳಿಕೆಯಲ್ಲಿ ಇಲ್ಲಸಲ್ಲದ ಭಾಗ್ಯಗಳನ್ನೇ ಸೇರಿಸಿದ್ದಾರೆ. ಆ ಮೂಲಕ ಲೂಟಿ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್ ಮೂಲಕ ಹಣ ಹೊಡೆಯುತ್ತಿದ್ದಾರೆ. ಈಗ ಇರುವ ಇಂದಿರಾ ಕ್ಯಾಂಟೀನ್‍ಗಳ ಪೈಕಿ ಎಷ್ಟು ಕ್ಯಾಂಟೀನ್‍ಗಳು ಮುಚ್ಚಿಹೋಗಿವೆ ಎಂಬುದೇ ತಿಳಿಯುತ್ತಿಲ್ಲ ಎಂದು ಲೇವಡಿ ಮಾಡಿದರು.  ಕಾಂಗ್ರೆಸ್ ಮತ್ತು ಬಿಜೆಪಿ ಇಬ್ಬರು ಲೂಟಿಕೋರರು.ಈ ಚುನಾವಣೆಯಲ್ಲಿ ಜನ ಸರಿಯಾಗಿ ಅವರಿಗೆ ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.  ಅಮಿತ್ ಷಾ ತಮ್ಮನ್ನು ಭೇಟಿ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ಸಿದ್ದರಾಮಯ್ಯನವರಿಗೆ ಕನಸು ಬಿದ್ದಿತ್ತೆ? ಎಂದು ಪ್ರಶ್ನಿಸಿದರಲ್ಲದೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂದು ತಿಳಿಸಿದರು.

Facebook Comments

Sri Raghav

Admin