ವಸತಿ ಯೋಜನೆಯ ಫಲಾನುಭವಿಗಳು ಆಧಾರ್‍ ಲಿಂಕ್ ಮಾಡುವುದು ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

Krishnappa Session

ಬೆಳಗಾವಿ (ಸುವರ್ಣಸೌಧ), ನ.15- ಇನ್ನು ಮುಂದೆ ವಸತಿ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲು ಆಧಾರ್‍ಲಿಂಕ್ ಮಾಡಲಾಗುವುದು ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಸತಿ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ವೇಳೆ ಸಾಕಷ್ಟು ಲೋಪದೋಷಗಳು ಉಂಟಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಕೆಲವು ಕಡೆ ಎರಡೆರಡು ಮನೆಗಳನ್ನೂ ಸಹ ಪಡೆದಿರುವ ನಿದರ್ಶನಗಳೂ ಇವೆ ಎಂದು ಹೇಳಿದರು.

ಇಂತಹ ದುರುಪಯೋಗ ತಡೆಗಟ್ಟಲು ಆಧಾರ್ ಲಿಂಕ್ ಮಾಡಲಾಗುವುದು. ಇದರಿಂದ ಯಾವುದೇ ರೀತಿಯ ದುರುಪಯೋಗ ನಡೆಯಲು ಸಾಧ್ಯವಿಲ್ಲ. ಕೆಲವೇ ತಿಂಗಳಲ್ಲಿ ಇದು ಜಾರಿಯಾಗಲಿದೆ ಎಂದು ಹೇಳಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ವಸತಿ ಯೋಜನೆಗಳಡಿ 13 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಸತಿಗಳನ್ನು ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

Facebook Comments

Sri Raghav

Admin