ವಾಟಾಳ್’ಗೆ ನೋಟೀಸ್ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

kumar

ಬೆಂಗಳೂರು, ಫೆ.17- ಕನ್ನಡ ಚಲನಚಿತ್ರೋದ್ಯಮಕ್ಕೆ, ಕಾರ್ಮಿಕರಿಗೆ, ಕಲಾವಿದರಿಗೆ ಅನುಕೂಲವಾಗಬೇಕೆಂಬ ನಿಟ್ಟಿನಲ್ಲಿ ಡಬ್ಬಿಂಗ್ ವಿರೋಧಿಸಿ ಹೋರಾಟ ಮಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರಿಗೆ ಕ್ಷಮಾಪಣೆ ಕೋರುವಂತೆ ನೋಟಿಸ್ ನೀಡಿರುವ ಕೃಷ್ಣಮೂರ್ತಿ, ಕೃಷ್ಣೇಗೌಡ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ  ಹೋರಾಟ ಮಾಡುವುದಾಗಿ ವಿವಿಧ ಕನ್ನಡ ಪರ ಸಂಘಟನೆಗಳು ಎಚ್ಚರಿಸಿವೆ. ಕರುನಾಡ ಸೇನೆ ಅಧ್ಯಕ್ಷ ಕೆ.ಆರ್. ಕುಮಾರ್, ಸಾರ್ವಜನಿಕ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್, ಗಿರಿಗೌಡ, ಶಿವರಾಮೇಗೌಡ ಸೇರಿದಂತೆ ಅನೇಕ ಸಂಘಟನೆಗಳ ಮುಖಂಡರು ಇಂದು ಪತ್ರಿಕಾಗೋಷ್ಠಿ ನಡೆಸಿ ವಾಟಾಳ್ ನಾಗರಾಜ್ ಅವರಿಗೆ ಇರುವ ಕನ್ನಡದ ಬದ್ಧತೆಯನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ. ಕನ್ನಡಕ್ಕಾಗಿ ನೆಲ, ಜಲ, ಭಾಷೆ, ಸಂಸ್ಕøತಿಗಾಗಿ ಜೀವಮಾನವಿಡಿ ಹೋರಾಟ ಮಾಡುತ್ತಿದ್ದಾರೆ.

ಡಬ್ಬಿಂಗ್ ಪರವಾಗಿರುವ ಪರಭಾಷೆಯನ್ನು ವೈಭವೀಕರಿಸುವ ಇಂತಹ ಕೆಲವರು ಕನ್ನಡ ಹೋರಾಟಗಾರರಾದ ವಾಟಾಳ್ ಅಂತಹವರಿಗೆ ನೋಟಿಸ್ ನೀಡುತ್ತಾರೆ ಎಂದರೆ ಅದನ್ನು ಸಹಿಸಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಮೂರು ದಿನಗಳೊಳಗಾಗಿ ಕೃಷ್ಣಮೂರ್ತಿ ಹಾಗೂ ಕೃಷ್ಣೇಗೌಡ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಾಣಿಜ್ಯಮಂಡಳಿ ಎದುರು ಬೃಹತ್ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin