ವಾಯುಭಾರ ಕುಸಿತ, ರಾಜ್ಯದ ಒಳನಾಡಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Bay

ಬೆಂಗಳೂರು, ಸೆ.20- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಒಳನಾಡಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ರಾತ್ರಿ ಹಾಗೂ ನಾಳೆ ಒಳ್ಳೆಯ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದರು.  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ತಮಿಳುನಾಡು ಹಾಗೂ ಆಂಧ್ರ ಪ್ರದೇಶದ ಹಲವು ಭಾಗಗಳಲ್ಲೂ ಉತ್ತಮ ಮಳೆಯಾಗಲಿದೆ.

ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ. ಮಳೆ ಇಲ್ಲದೆ ಬಿತ್ತಿದ ಬೆಳೆಗಳು ಒಣಗುತ್ತಿದ್ದವು. ಕೆರೆ-ಕಟ್ಟೆಗಳಿಗೆ ನೀರು ಕೂಡ ಬಂದಿರಲಿಲ್ಲ. ಈಗ ವಾಯುಭಾರ ಕುಸಿತದಿಂದ ಬೀಳುವ ಮಳೆ ಆಪತ್ಕಾಲಕ್ಕೆ ದೊರೆತಂತಾಗುತ್ತದೆ ಎಂದು ಹೇಳಿದರು. ಸ್ಥಳೀಯ ಹವಾ ಮುನ್ಸೂಚನೆ ಪ್ರಕಾರ, ಬೆಂಗಳೂರು ಸುತ್ತಮುತ್ತ ಮೋಡ ಮುಸುಕಿದ ವಾತಾವರಣ ಕಂಡುಬರಲಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಗಳಿವೆ.

► Follow us on –  Facebook / Twitter  / Google+

Facebook Comments

Sri Raghav

Admin