ವಾರ್ದಾ ಚಂಡಮಾರುತಕ್ಕೆ ನಾಲ್ಕು ಜನ ಬಲಿ, 226 ಗಂಜಿ ಕೇಂದ್ರ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

Vardah-Cyclone

ಚೆನ್ನೈ. ಡಿ.12 : ವಾರ್ದಾ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸುತ್ತಿದ್ದಂತೆ ಚೆನ್ನೈ ಸೇರಿದಂತೆ ಹಲವು ನಗರಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ನಾಲ್ಕು ಜನ ಪ್ರಾಣ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ. ಆದರೆ ಮೃತರ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಈ ಮಧ್ಯೆ 226 ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದ್ದು ನಿರಾಶ್ರಿತರಿಗೆ ಆಶ್ರಯ, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.  ಮಳೆಗೆ ಜನ ತತ್ತರಿಸಿದ್ದು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹಲವೆಡೆ ಭೂಕುಸಿತ ಉಂಟಾಗಿದ್ದರೆ ಕೆಲವೆಡೆ ನೂರಾರು ಮರಗಳು ಧರೆಗುರುಳಿವೆ. ಭೂಕುಸಿತ ಮತ್ತು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಹಲವಾರು ವಾಹನಗಳು ಜಖಂಗೊಂಡಿದ್ದರೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಗೀಡಾಗಿದೆ. ಬಹುತೇಕ ರಸ್ತೆಗಳು ಜಲಾವೃತಗೊಂಡಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin