ವಾರ್ಧಾವತಾರ : ಸತ್ತವರ ಸಂಖ್ಯೆ 15ಕ್ಕೇರಿಕೆ, ಆಂಧ್ರದಲ್ಲೂ ಇಬ್ಬರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Vardha-01
ಚೆನ್ನೈ/ಹೈದರಾಬಾದ್, ಡಿ.13-ಬಂಗಾಳಕೊಲ್ಲಿಯಲ್ಲಿ ಎದ್ದಿರುವ ವಾರ್ದಾ ಚಂಡಮಾರುತ ಆರ್ಭಟಕ್ಕೆ ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಬಲಿಯಾದವರ ಸಂಖ್ಯೆ 15ಕ್ಕೇರಿದೆ. ಪ್ರಚಂಡ ವೇಗದ ಗಾಳಿ ಮತ್ತು ಧಾರಾಕಾರ ಮಳೆಯಿಂದ ಸಾವಿರಾರು ಜನರ ಸಂತ್ರಸ್ತರಾಗಿದ್ದಾರೆ. ಇಂದೂ ಕೂಡ ಈ ಎರಡೂ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಕ್ತವಾಗಿದೆ. ನಿನ್ನೆಯಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿರುವುದರಿಂದ ಜನರು ಪರದಾಡುತ್ತಿದ್ದಾರೆ.  ಇದೇ ವೇಳೆ ವಾರ್ದಾ ಚಂಡಮಾರುತ ಕರ್ನಾಟಕ ಕರಾವಳಿ ತೀರವನ್ನು ಪ್ರವೇಶಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗುತ್ತಿದೆ.

Vardha-06

ಚೆನ್ನೈ ವರದಿ :

ಚಂಡಮಾರುತದ ರೌದ್ರಾವತಾರಕ್ಕೆ ತಮಿಳುನಾಡು ತತ್ತರಿಸಿದೆ. ರಾಜ್ಯ ವಿವಿಧೆಡೆ ಭಾರೀ ಮಳೆಗೆ ಸಂಬಂಧಪಟ್ಟ ದುರಂತಗಳಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಸಂತ್ರಸ್ತರಾದವರ ಸಂಖ್ಯೆ ಲೆಕ್ಕಕ್ಕೆ ಸಿಗುತ್ತಿಲ್ಲ. ಚೆನ್ನೈ, ಕಡಲೂರು, ತಿರುವಳ್ಳೂರು, ಕಾಂಚೀಪುರಂ. ವಿಳುಪುರಂ, ಕೃಷ್ಣಗಿರಿ, ತಿರುವಣ್ಣಾಮಲೈ ಹಾಗೂ ಪುದುಚೇರಿಯಲ್ಲಿ ವಾರ್ಧಾ ಆರ್ಭಟಕ್ಕೆ 20 ಸಾವಿರಕ್ಕೂ ಹೆಚ್ಚು ಮರಗಳು, ನೂರಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಅನೇಕ ಕಟ್ಟಡಗಳು, ವಾಹನಗಳು ಜಖಂಗೊಳಿವೆ.  ಇಂದು ಸಹ ಕರಾವಳಿ ಪ್ರದೇಶಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಏರುಪೇರಾಗಿದೆ. ಬಸ್ ಮತ್ತು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ಎನ್‍ಡಿಆರ್‍ಎಫ್ ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

Vardha-02

ಹೈದರಾಬಾದ್ ವರದಿ :

ಆಂಧ್ರಪ್ರದೇಶದಲ್ಲೂ ವಾರ್ಧಾ ಅಬ್ಬರ ಮುಂದುವರೆದಿದ್ದು, ಈವರೆಗೆ ನಾಲ್ವರು ಬಲಿಯಾಗಿದ್ದಾರೆ. ನೆಲ್ಲೂರು, ಮಚಲಿಪಟ್ಟಣ, ಚಿತ್ತೂರು, ಕಡಪ, ಕೃಷ್ಣಾ, ಪ್ರಕಾಶಂ, ಕರ್ನೂಲು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ಜಿಲ್ಲೆಗಳಲ್ಲಿ ಅನೇಕ ಮರಗಳು ಮತ್ತು ಕಂಬಗಳು ಉರುಳಿ ಬಿದ್ದು ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಎನ್‍ಡಿಆರ್‍ಎಫ್ ಸಿಬ್ಬಂದಿ ಸೂಕ್ಷ ಸ್ಥಳಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Vardha-05

 ಬೆಂಗಳೂರು ವರದಿ :

ವಾರ್ದಾ ಕರ್ನಾಟಕ ಕರಾವಳಿಯನ್ನು ಪ್ರವೇಶಿಸಿದೆ. ಚಂಡಮಾರುತ ದುರ್ಬಲವಾಗಿದ್ದರೂ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಬೆಂಗಳೂರು, ಕೋಲಾರ, ಮೈಸೂರು, ಚಿಕ್ಕಮಗಳೂರು, ಚಿತ್ರದುರ್ಗ, ಮಂಢ್ಯ, ತುಮಕೂರು ಮೊದಲಾದ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.  ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ರಾತ್ರಿಯಿಂದ ಮಳೆಯಾಗುತ್ತಿದೆ. ಇನ್ನೂ ಮೂರು-ನಾಲ್ಕು ದಿನ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Vardha-04

Vardha-03

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin