ವಾಲ್ಮೀಕಿ ಭವನ ನಿರ್ಮಾಣಕ್ಕೆ ಆಗ್ರಹಿಸಿ ಡಿಸಿಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

tumakuru

ತುಮಕೂರು, ಸೆ.23- ನಿಗದಿತ ಜಾಗದಲ್ಲಿಯೇ ಶ್ರೀಮಹರ್ಷಿ ವಾಲ್ಮೀಕಿ ಭವನ ನಿರ್ಮಿಸಬೇಕು ಎಂದು ಆಗ್ರಹಿಸಿ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ದೊಡ್ಡಯ್ಯ ಮತ್ತು ಕಾರ್ಯದರ್ಶಿ ಪುಟ್ಟರಾಮಯ್ಯ ಅವರ ನೇತೃತ್ವದಲ್ಲಿ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಸಮಸ್ಯೆ ಕುರಿತು ಚರ್ಚೆ ನಡೆಸಿದರು.ಮನವಿ ಸ್ವೀಕರಿಸಿ ಸಮಾತನಾಡಿದ ಜಿಲ್ಲಾಧಿಕಾರಿ, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿದೆ. ಆದರೆ, ಇದುವರೆಗೂ ಇಲ್ಲಸಲ್ಲದ ಕಾರಣ ಹೇಳಿಕೊಂಡು ಕಾಮಗಾರಿ ಆರಂಭಿಸಿಲ್ಲ. ಇದನ್ನು ಗಂಭೀರವಾಗಿ ಜಿಲ್ಲಾಡಳಿತ ಪರಿಗಣಿಸಿ ಕೂಡಲೇ ಜಿಲ್ಲಾ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕರಿಗೆ ಸೂಚನೆ ನೀಡುವುದಾಗಿ ಹೇಳಿದರು.ಜಿಲ್ಲಾ ಕಾಂಗ್ರೆಸ್ ಎಸ್‍ಟಿ ಘಟಕದ ಅಧ್ಯಕ್ಷ ಟಿ.ಬಿ.ಮಲ್ಲೇಶ್,ಪುರುಷೊತ್ತಮ್, ಭೀಮಾನಾಯಕ್, ಕೃಷ್ಣನ್, ತಿಪ್ಪೇಸ್ವಾಮಿ, ಪಾಪಣ್ಣ ಮತ್ತಿತರರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin