ವಾಹನ ಡಿಕ್ಕಿ : ಪಾದಚಾರಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

accident

ಕೆಜಿಎಫ್, ಆ.27- ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ತಿವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಆಂಡ್ರಸನ್ ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಜೆ.ಕೆ.ಪುರಂ ನಿವಾಸಿ ನಾಗರಾಜ್ ( 38) ಮೃತ ದುರ್ದೈವಿ.ರಾಜಪೇಟೆ ರಸ್ತೆ ಬದಿ ನಡೆದು ಹೋಗುತ್ತಿದ್ದ ನಾಗರಾಜ್ ಅವರಿಗೆ ಅಪರಿಚಿತ ಹಾಲಿನ ವಾಹನವೊಂದು ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದು ತೀವ್ರಗಾಯಗೊಂಡ ಇವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ನಾಗರಾಜ್ ಮೃತಪಟ್ಟಿದ್ದಾರೆ.ಈ ಸಂಬಂಧ ಆಂಡ್ರಸನ್‍ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin