ವಾಹನ ಸವಾರರಿಗೊಂದು ಸಿಹಿಸುದ್ದಿ, ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ಇಳಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Petrol-Pump

ನವದೆಹಲಿ. ಅ.04 : ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮಂಗಳವಾರ ರೂ.2ರಷ್ಟು ಕಡಿತ ಮಾಡಿದೆ. ಈ ಹಿನ್ನೆಲೆಯಲ್ಲಿ ತೈಲ ಬೆಲೆಯಲ್ಲಿ 2 ರೂ. ಇಳಿಕೆ ಕಂಡಿದ್ದು ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚುತ್ತಿದ್ದರೂ ದರ ಸರಿದೂಗಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸುಂಕ ಕಡಿತದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 26 ಸಾವಿರ ಕೋಟಿ ರುಪಾಯಿ ಹೊರೆ ಬೀಳಲಿದೆ. ಉಳಿದಿರುವ ಅವಧಿಗೆ 13 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿತ್ತು. ಸದ್ಯ ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರ ಪ್ರತಿ ಲೀಟರ್ ಗೆ 21.48 ರುಪಾಯಿ ಹಾಗೂ ಡೀಸೆಲ್ ಮೇಲೆ ಪ್ರತಿ ಲೀಟರ್ 17.33 ರುಪಾಯಿ ಅಬಕಾರಿ ಸುಂಕ ವಿಧಿಸುತ್ತಿದೆ.

ಜುಲೈ 4ರಿಂದ ಈವರೆಗೂ ಪೆಟ್ರೋಲ್‌ ದರ ಪ್ರತಿ ಲೀಟರ್‌ಗೆ ರೂ.7.8ರಷ್ಟು ಏರಿಕೆಯಾಗಿದ್ದು, ಡೀಸೆಲ್‌ ರೂ.5.7ರಷ್ಟು ಹೆಚ್ಚಳ ಕಂಡಿದೆ.
ಪೆಟ್ರೋಲ್ ಹಾಗೂ ಡೀಸೆಲ್ ದರಗಳ ದೈನಂದಿನ ಪರಿಷ್ಕರಣೆಗೆ ಕೇಂದ್ರ ಸರಕಾರ ಮುಂದಾದ ನಂತರ ತೈಲಗಳ ಬೆಲೆ ಏರಿಕೆಯಾಗಿತ್ತು.
ಬೆಂಗಳೂರಲ್ಲಿ ಇಂದಿನ ಪರಿಷ್ಕೃತ ದರ ಇಂತಿದೆ :
ಪೆಟ್ರೋಲ್ : 69.44
ಡೀಸೆಲ್ : 56.96

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin