ವಿಜಯೇಂದ್ರಗೆ ಟಿಕೆಟ್ ನೀಡದಿದ್ದಕ್ಕೆ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ

ಈ ಸುದ್ದಿಯನ್ನು ಶೇರ್ ಮಾಡಿ

BJP--01
ಮೈಸೂರು, ಏ.24-ವರುಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದ ಕಾರಣ ಆಕ್ರೋಶಗೊಂಡ ಕಾರ್ಯಕರ್ತರು ನಗರದ ಇಟ್ಟಿಗೆಗೂಡಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಿಜೆಪಿ ಕಚೇರಿಯ ಮುಂಭಾಗದ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಬಿಜೆಪಿ ಕಚೇರಿ ಎಂಬ ನಾಮಫಲಕವನ್ನು ಕಿತ್ತು ಹಾಕಲಾಗಿದೆ.

ವರುಣ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧಿಸುವುದಿಲ್ಲ. ಅವರಿಗೆ ಟಿಕೆಟ್ ನೀಡಿಲ್ಲ ಎಂದು ಬಿಜೆಪಿ ಚುನಾವನಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹೇಳುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡರು. ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಖಾಸಗಿ ಹೊಟೇಲೊಂದರ ಬಳಿ ಕಾರ್ಯಕರ್ತರು ಪ್ರತಿಭಟನೆಗಿಳಿದಾಗ ಸಾರ್ವಜನಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು.  ಇಲ್ಲಿಂದ ಇಟ್ಟಿಗೆಗೂಡಿನ ಬಿಜೆಪಿ ಕಚೇರಿ ಬಳಿ ತೆರಳಿದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು.  ಈ ಹಿನ್ನೆಲೆಯಲ್ಲಿ ಪ್ರಕಾಶ್ ಜಾವ್ಡೇಕರ್ ಅವರು ತಂಗಿರುವ ಹೊಟೇಲ್ ಮತ್ತು ಬಿಜೆಪಿ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin