ವಿದೇಶದಿಂದ ಮರಳು ಆಮದು ಮಾಡಿಕೊಳ್ಳಲು ಸರ್ಕಾರ ನಿರ್ಧಾರ

ಈ ಸುದ್ದಿಯನ್ನು ಶೇರ್ ಮಾಡಿ

Sand-Import--01

ಬೆಂಗಳೂರು, ಆ.1- ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ ವಿದೇಶದಿಂದ ಮರಳು ತರಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಬರ್ಮಾ, ಮಲೇಷಿಯಾ, ಥೈಲ್ಯಾಂಡ್‍ನಿಂದ ಮರಳು ತರಿಸಲು ತೀರ್ಮಾನ ಮಾಡಲಾಗಿದ್ದು, ವಿದೇಶದಿಂದ ಬರುವ ಮರಳನ್ನು 25 ಕೆಜಿ ತೂಕದ ಬ್ಯಾಗ್‍ನಲ್ಲಿ ಸಿಮೆಂಟ್ ಮಾದರಿಯಲ್ಲಿ ಮಾರಾಟ ಮಾಡಲು ಆರು ಕಂಪೆನಿಗಳಿಗೆ ಅನುಮತಿ ನೀಡಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮುಂದಾಗಿದೆ.

ಕಡಿಮೆ ದರದಲ್ಲಿ ಮರಳು ನೀಡಲು ಕಂಪೆನಿಗಳಿಗೆ ಗುತ್ತಿಗೆ ನೀಡಲು ಸರ್ಕಾರ ಚಿಂತನೆ ನಡೆಸಿದೆ.  ವಿದೇಶದಿಂದ ಮರಳು ತರಿಸುವುದರಿಂದ ರಾಜ್ಯದ ನೈಸರ್ಗಿಕ ಸಂಪತ್ತು ಉಳಿಯಲಿದೆ. ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿದಂತಾಗುತ್ತದೆ. ಕಡಿಮೆ ದರದಲ್ಲಿ ಉತ್ತಮ ಮರಳು ನಿರ್ಮಾಣ ಕ್ಷೇತ್ರಕ್ಕೆ ಲಭ್ಯವಾಗಲಿದೆ ಎಂದು ಇರಾದೆ ಇದೆ.  ಮರಳಿನ ಕೊರತೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಕ್ರಮಕ್ಕೆ ಬ್ರೇಕ್ ಹಾಕಲು ಈ ಕ್ರಮ ಎಂಬುದು ಸರ್ಕಾರದ ವಾದವಾಗಿದೆ.
ಮುಂದಿನ ತಿಂಗಳಿನಿಂದ ಆರು ಕಂಪೆನಿಗಳಿಗೆ ಅನುಮತಿ ಕೊಡಲು ಗಣಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ನೈಸರ್ಗಿಕ ಸಂಪತ್ತು ಉಳಿಯುವುದರ ಜತೆಗೆ ಜಲಮೂಲಕ್ಕೂ ಧಕ್ಕೆಯಾಗುವುದು ಸಹ ನಿಲ್ಲಲಿದೆ. ಜನರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮರಳು ಸಿಗುವುದಾದರೆ ಏಕೆ ಅನುಮತಿ ನೀಡಬಾರದು. ಎಲ್ಲ ಹಂತದಲ್ಲೂ ಯೋಚನೆ ಮಾಡಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ವಿದೇಶದಿಂದ ಮರಳು ತರಿಸಲು ಮುಂದಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin