ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ವಿಜ್ಞಾನದ ಅಧ್ಯಯನ ಮಾಡಬೇಕು

ಈ ಸುದ್ದಿಯನ್ನು ಶೇರ್ ಮಾಡಿ

13

ಬೆಳಗಾವಿ,ಮಾ.3- ಇಂದಿನ ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ವಿಜ್ಞಾನದ ಮಹತ್ವ, ಸಿದ್ಧಾಂತ, ಪ್ರಯೋಗಗಳು ಸರಿಯಾಗಿ ತಿಳಿದುಕೊಂಡು ಅಧ್ಯಯನ ಮಾಡಬೇಕು ಎಂದು ಗೋಗಟೆ ಅಭಿಯಾಂತ್ರಿಕ ಸಂಸ್ಥೆಯ ಪ್ರಾಚಾರ್ಯ ಡಾ. ಎ.ಎಸ್. ದೇಶಪಾಂಡೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ನಗರದ ಪ್ರತಿಷ್ಠಿತ ಕೆಎಲ್‍ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿರುವ ಯಾಂತ್ರಿಕೃತ ವಿಜ್ಞಾನದ ಬಗ್ಗೆ ತಿಳಿದುಕೊಂಡು ಹೊಸ-ಹೊಸ ಆವಿಷ್ಕಾರ ಮಾಡಬೇಕು. ವಿಜ್ಞಾನದ ವಿವಿಧ ಆಯಾಮಗಳನ್ನು ನಿರಂತರವಾಗಿ ಅಧ್ಯಯನ ಮಾಡಿದರೆ ಯಶಸ್ಸು ಸಾಧ್ಯವಾಗುತ್ತದೆ. ಭಾರತ ದೇಶವು ವಿಜ್ಞಾನದಲ್ಲಿ ಬಲಿಷ್ಠ ಮತ್ತು ಸಾಮಥ್ರ್ಯ ದಿಂದ ಕೂಡಿದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ. ವಿ.ಡಿ. ಯಳಮಲಿ ಮಾತನಾಡಿ, ಸರ್. ಸಿ.ವಿ. ರಾಮನ್ ಅವರು ಕಲಾ ವಿಭಾಗವನ್ನು ಅಧ್ಯಯನ ಮಾಡಿ ಭಾರತೀಯ ನಾಗರಿಕ ಸೇವೆ ಸಲ್ಲಿಸಿದರು. ನಂತರ ಭೌತಶಾಸ್ತ್ರವನ್ನು ನಿರಂತರ ಅಧ್ಯಯನ ಮಾಡಿ ರಾಮನ್ ಪರಿಣಾಮವನ್ನು ಪ್ರಸಿದ್ದಗೊಳಿಸಿದರು. ವಿಜ್ಞಾನ ವಿದ್ಯಾರ್ಥಿ ಅಲ್ಲದಿದ್ದರೂ ವಿಜ್ಞಾನ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡುವುದರ ಮೂಲಕ ಪ್ರಾತಃಸ್ಮರಣಿಯರಾಗಿದ್ದಾರೆ. ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಸಕಾರತ್ಮಕವಾಗಿ ಚಿಂತನೆ ಮಾಡಿದರೆ ಪ್ರತಿಫಲ ಸಿಗುತ್ತದೆ. ಪ್ರಸ್ತುತ ಸಂದರ್ಭದಲ್ಲಿ ವಿಜ್ಞಾನವು ಪ್ರತಿಯೊಬ್ಬರಿಗೂ ಸಹಕಾರಿಯಾಗಿದೆ ಅದನ್ನು ಉಪಯೋಗಿಸಿಕೊಂಡು ಭಾರತ ದೇಶವನ್ನು ಬಲಿಷ್ಠ ದೇಶವನ್ನಾಗಿ ಮಾಡಬೇಕೆಂದು ಕರೆನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin