ವಿದ್ಯಾರ್ಥಿ ಅತ್ಯಾಚಾರ-ಹತ್ಯೆ ಖಂಡಿಸಿ ಕರೆ ನೀಡಿದ್ದ ಬೀದರ್ ಬಂದ್‍ಗೆ ವ್ಯಾಪಕ ಬೆಂಬಲ

ಈ ಸುದ್ದಿಯನ್ನು ಶೇರ್ ಮಾಡಿ

Bidar-Bandh

ಬೀದರ್, ಜ.30-ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕರೆ ನೀಡಲಾಗಿದ್ದ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಹಿವಾಟು ಸ್ಥಗಿತಗೊಳಿಸಲಾಗಿತ್ತು. ಬಸ್ ಹಾಗೂ ಆಟೋಗಳು ರಸ್ತೆಗಿಳಿಯದೆ ಬಂದ್‍ಗೆ ಬೆಂಬಲಿಸಿದವು. ನಗರದಲ್ಲಿ ಬಂದ್‍ಗೆ ಕರೆ ನೀಡಿದ್ದ ಹಿಂದೂ ಪರ ಸಂಘಟನೆಗಳು ಇಂದು ಅಂಬೇಡ್ಕರ್ ವೃತ್ತದಲ್ಲಿ ವಿದ್ಯಾರ್ಥಿನಿಯ ಹತ್ಯೆಯನ್ನು ತೀವ್ರವಾಗಿ ಖಂಡಿಸಿದರಲ್ಲದೆ, ಕೂಡಲೇ ಆರೋಪಿಗಳನ್ನು ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು. ಬೆಳಗಿನಿಂದಲೇ ಬಂದ್ ಆಚರಣೆ ಹಿನ್ನೆಲೆಯಲ್ಲಿ ನಗರಾದ್ಯಂತ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು. ಪ್ರಮುಖ ವೃತ್ತ, ರಸ್ತೆಗಳಲ್ಲಿ ಪೊಲೀಸ್ ಪಹರೆ ಏರ್ಪಡಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು.

Facebook Comments

Sri Raghav

Admin