ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

asfAFAGF

ತುಮಕೂರು,ಆ.7-ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಮೋಹನ್‍ರಾಜ್ ಅವರು ಸ್ವಚ್ಛತೆ ಬಗ್ಗೆ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರೆ.    ಕಟ್ಟಡ ಶಿಥಿಲಗೊಂಡಿರುವುದರಿಂದ ಕೂಡಲೇ ಸ್ಥಳಾಂತರಿಸುವಂತೆ ಸಂಬಂಧಪಟ್ಟರಿಗೆ ಸೂಚನೆ ನೀಡಿದರು.  ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಸ್ಥಳೀಯ ಶಾಸಕರೊಂದಿಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ಹಾಗೂ ತಾಲೂಕು ಪಂಚಾಯತಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳು ರಾತ್ರಿ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿದ್ದರು. ಜಿಲ್ಲಾಧಿಕಾರಿಗಳು ಖುದ್ದು ಅಡುಗೆ ಕೋಣೆಗೆ ತೆರಳಿ ಅಡುಗೆ ಕೋಣೆಯಲ್ಲಿನ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು ಹಾಗೂ ಡಬ್ಬಗಳಲ್ಲಿ ಸಂಗ್ರಹಿಸಿದ್ದ ಅಕ್ಕಿ, ರಾಗಿ ಇತರೆ ದಿನಸಿ ಪದಾರ್ಥಗಳನ್ನು ಪರಿಶೀಲಿಸಿದಾಗ ರಾಗಿ ಕಡಿಮೆ ಗುಣಮಟ್ಟದ್ದಾಗಿರುವುದು ಕಂಡು ಬಂದಿತು. ಇತರೆ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ವಿದ್ಯಾರ್ಥಿ ನಿಲಯದಲ್ಲಿನ ವಿದ್ಯಾರ್ಥಿಗಳಿಗಾಗಿ ತಯಾರಿಸಿದ್ದ ಆಹಾರವನ್ನು ತಾವೂ ಸೇವಿಸಿದರು.

ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳ ಕೊಠಡಿಗಳ ವೀಕ್ಷಣೆ ಮಾಡಿದರು. ಬಯೋಮೆಟ್ರಿಕ್ ಹಾಜರಾತಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ  ನಿಲಯದಲ್ಲಿರುವ ಫ್ರಿಡ್ಜ್ ಪರಿಶೀಲಿಸಿ ಅದನ್ನು ದುರಸ್ತಿಪಡಿಸಲು ಸೂಚಿಸಿದರು. ವಿದ್ಯಾರ್ಥಿಗಳಿಂದ ಪ್ರತಿನಿತ್ಯ ನೀಡುವ ಊಟದ ಮೆನುಗಳ ಬಗ್ಗೆ ಹಾಗೂ ನಿಲಯದಲ್ಲಿರುವ ಸಮಸ್ಯೆಗಳ ಕುರಿತು ವಾರ್ಡನ್ ಅವರೊಂದಿಗೆ ಚರ್ಚಿಸಿದರು.  1967ರಲ್ಲಿ ನಿರ್ಮಾಣವಾಗಿರುವ ಈ ವಿದ್ಯಾರ್ಥಿ ನಿಲಯದ ಮೇಲ್ಛಾವಣಿ ಅಲ್ಲಲ್ಲಿ ಬೀಳುತ್ತಿರುವುದು ಗಮನಿಸಿದ ಜಿಲ್ಲಾಧಿಕಾರಿಗಳು ಒಂದು ವಾರದೊಳಗೆ ಬೇರೆಡೆಗೆ ಸ್ಥಳಾಂತರಿಸುವಂತೆ ನಿಲಯದ ಪಾಲಕರಾದ ನಾಗಮಣಿ ಅವರಿಗೆ ಸೂಚಿಸಿದರು.ತದನಂತರ ವಿದ್ಯಾರ್ಥಿ ನಿಲಯ ಸ್ಥಳಾಂತರಿಸುವ ಬಾಡಿಗೆ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Facebook Comments

Sri Raghav

Admin