ವಿದ್ಯಾವಾರಿಧಿ ಶಾಲೆ ವಿದ್ಯಾರ್ಥಿಗಳ ಸಾವಿನ ಪ್ರಕರಣ : ತನಿಖೆಗೆ ಸಿಎಂ ಆದೇಶ
ಬೆಂಗಳೂರು,ಮಾ.9– ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರಿನ ವಿದ್ಯಾವಾರಿಧಿ ರೆಸಿಡೆನ್ಷಿ ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳ ಸಾವಿಗೆ ತೀವ್ರ ದಿಗ್ಬ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ವಸತಿ ಶಾಲೆಯಲ್ಲಿ ನಡೆದಿರುವ ವಿದ್ಯಾರ್ಥಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಕಾರಣ ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಿಎಂ ಆದೇಶಿಸಿದ್ದಾರೆ. [ ಇದನ್ನೂ ಓದಿ : ಫುಡ್ ಪಾಯಿಸನ್’ನಿಂದ 3 ಮಕ್ಕಳ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ] ಘಟನೆ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಕೂಡಲೇ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
[ ಇದನ್ನೂ ಓದಿ : ಹುಳಿಯಾರು ಶಾಲೆಯಲ್ಲಿ ವಿಷ ಮಿಶ್ರಿತ ಆಹಾರ ಸೇವಿಸಿ ಮೂರು ಮಕ್ಕಳ ಸಾವು ]
[ ಇದನ್ನೂ ಓದಿ : 3 ಮಕ್ಕಳ ಸಾವು ಪ್ರಕರಣ : ಮಾಜಿ ಶಾಸಕ ಕಿರಣ್ಕುಮಾರ್ ಪೊಲೀಸರ ವಶಕ್ಕೆ ]
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS