ವಿದ್ಯುತ್ ಕಂಬಕ್ಕೆ ಕ್ಯಾಂಟರ್ ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

deadly--accident

ಹಳೆಬೀಡು, ನ.4- ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಳೆಬೀಡಿನ ಪುಷ್ಪಗಿರಿ ಬೆಟ್ಟದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಹೊಳೆನರಸೀಪುರ ತಾಲೂಕು ಲಕ್ಕೂರಿನ ಶರೀಫ್ (35), ಹಾಸನದ ರಥಲ್‍ಖಾನ್ (35) ಮತ್ತು ಶಾನ್‍ಪಾಷ (40) ಎಂದು ಗುರುತಿಸಲಾಗಿದೆ. ಶೇಖರ್ ಎಂಬಾತನಿಗೆ ತೀವ್ರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಹೊಳೆನರಸೀಪುರದಿಂದ ಬಾಣವಾರಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಕ್ಯಾಂಟರ್‍ನಲ್ಲಿದ್ದ ಎರಡು ಎತ್ತುಗಳು ಕೂಡ ಸಾವನ್ನಪ್ಪಿವೆ. ಹಳೆಬೀಡು  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin