ವಿದ್ಯುತ್ ತಂತಿ ತುಳಿದು ರೈತ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

death--farmer's-electric

ಬೆಳಗಾವಿ, ಆ.12- ವಿದ್ಯುತ್ ತಂತಿ ತುಳಿದು ರೈತನೊಬ್ಬ ಸಾವನ್ನಪ್ಪಿರುವ ದುರ್ಘಟನೆ ಹುಕ್ಕೇರಿ ತಾಲ್ಲೂಕಿನ ಬೋರಗಲ್ಲು ಗ್ರಾಮದಲ್ಲಿ ನಡೆದಿದೆ.ನಿನ್ನೆ ಸಂಜೆ ಸುರಿದ ಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ಇಂದು ಬೆಳಗ್ಗೆ ಜಮೀನಿಗೆ ತೆರಳುವಾಗ ಕಾಣದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದಾಗ ನಾಗಪ್ಪಾಬೊಂಬಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದನ್ನು ಕಂಡ ಸ್ಥಳೀಯರು ತಕ್ಷಣ ಹೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಆದರೆ, ಅವರು ಬಾರದಿದ್ದರಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಸಂಕೇಶ್ವರ ಠಾಣೆ ಪೆÇಲೀಸರು ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin