ವಿದ್ಯುತ್ ತಂತಿ ಸ್ಪರ್ಶ : ಆನೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

death--farmer's-electric

ಹಾಸನ,ಆ.26- ಅರಣ್ಯದಂಚಿನಲ್ಲಿ ಹಾಕಲಾಗಿದ್ದ ವಿದ್ಯುತ್ ತಂತಿಗೆ ಸಿಕ್ಕ ಆನೆಯೊಂದು ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮದಲ್ಲಿ ನಡೆದಿದೆ. ಸುಮಾರು 16 ವರ್ಷದ ಗಂಡಾನೆ ಸತ್ತು ಬಿದ್ದಿರುವುದನ್ನು ನೋಡಿದ ಗ್ರಾಮಸ್ಥರೊಬ್ಬರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಹಾರ ಅರಸಿ ಗ್ರಾಮದತ್ತ ಬರುವ ಆನೆಗಳನ್ನು ತಡೆಯುವ ನಿಟ್ಟಿನಲ್ಲಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. ಆದರೆ ಅದು ಕನಿಷ್ಠ ಮಟ್ಟದ ವಿದ್ಯುತ್ ಹರಿಸಲಾಗಿತ್ತು. ಆದರೆ ಆನೆ ಆತುರದಲ್ಲಿ ನುಗ್ಗಿ ವಿದ್ಯುತ್ ತಂತಿಗಳು ಕಾಲಿಗೆ ಸುತ್ತಿಕೊಂಡು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin