ವಿದ್ಯುತ್ ಲೈನ್ ಎಳೆಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಹರಿದು ನೌಕರನೊಬ್ಬ ಸಾವನ್ನಪ್ಪಿರುವ ಘಟನೆ

ಈ ಸುದ್ದಿಯನ್ನು ಶೇರ್ ಮಾಡಿ

Short-Circuit
ಮಂಡ್ಯ, ನ.28-
ವಿದ್ಯುತ್ ಲೈನ್ ಎಳೆಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಹರಿದು ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರನೊಬ್ಬ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಅಗರಲಿಂಗನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.ಮೂಲತಃ ಅಸ್ಸಾಂ ರಾಜ್ಯದ ನಗೂನ್ ಗ್ರಾಮದ ನಿವಾಸಿ ಬದೂನ್ (22) ಮೃತಪಟ್ಟ ದುರ್ದೈವಿ.ಚೆಸ್ಕಾಂ ವಿದ್ಯುತ್ ಕಂಪೆನಿಯಲ್ಲಿ ಗುತ್ತಿಗೆ ಅವಧಿಯಲ್ಲಿ ಕೆಲಸ ಮಾಡುತ್ತಿದ್ದ ಬದೂನ್ ನಿನ್ನೆ ನಿರಂತರ ಜ್ಯೋತಿ ಯೋಜನೆಯಡಿ ಅಗರಲಿಂಗನದೊಡ್ಡಿ ಗ್ರಾಮದಲ್ಲಿ ವಿದ್ಯುತ್ ಲೈನ್ ಎಳೆಯುತ್ತಿದ್ದರು.ಈ ಸಂದರ್ಭದಲ್ಲಿ ವಿದ್ಯುತ್ ಲೈನ್ ಎಳೆಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin