ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

chikkamangaluru--man--death

ಚಿಕ್ಕಮಗಳೂರು,ಸೆ.16-ಜಮೀನಿನಲ್ಲಿ ಕೂಲಿ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶಿಸಿ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಳೇಕಲ್ಲಹಳ್ಳಿಯ ವಾಸಿ ಮಂಜುನಾಥ್(24) ಮೃತಪಟ್ಟ ದುರ್ದೈವಿ. ಈತ ಇಂದು ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಅದೇ ಗ್ರಾಮದ ಅಜ್ಜೇಗೌಡ್ರು ಜಮೀನಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದರು. ಈ ವೇಳೆ ಬೇಲಿಗೆ ವಿದ್ಯುತ್ ಹರಿಸಲಾಗಿತ್ತು. ಆಕಸ್ಮಿಕವಾಗಿ ಇದನ್ನು ಸ್ಪರ್ಶಿಸಿದ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

 

Facebook Comments

Sri Raghav

Admin