ವಿಧಾನಪರಿಷತ್ ಮಾಜಿ ಸದಸ್ಯ ದಯಾನಂದರೆಡ್ಡಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

Dayananad-Reddy--01

ಆನೇಕಲ್, ಮಾ.8- ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದರೆಡ್ಡಿ ಕಾಂಗ್ರೆಸ್ ತೊರೆದು ಯಡಿಯೂರಪ್ಪಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳಿಧರ ರಾವ್, ಮಾಜಿ ಸಚಿವ ಎ.ನಾರಾಯಣಸ್ವಾಮಿ ದಯಾನಂದರೆಡ್ಡಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರಮೋದಿಯವರ ಉತ್ತಮ ಆಡಳಿತಕ್ಕೆ ಮನಸೋತು ನಾನು ಬಿಜೆಪಿ ಸೇರುತ್ತಿದ್ದೆನೆ. ಅವರ ಹಲವಾರು ಜನಪರ ಯೋಜನೆಗಳು ಈಶಾನ್ಯ ಭಾಗದಲ್ಲಿ ಬಿಜೆಪಿ ಗೆಲ್ಲಲು ಕಾರಣವಾಗಿದೆ. ಹಾಗೆ ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ದಯಾನಂದರೆಡ್ಡಿ ಹೇಳಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ತಿಪ್ಪಾರೆಡ್ಡಿ , ಹುಸ್ಕೂರು ಪಾಪಣ್ಣ ಸೇರಿದಂತೆ ನೂರಾರು ಬೆಂಬಲಿಗರು ಬಿಜೆಪಿ ಸೇರಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಕೆ.ವಿ.ಶಿವಪ್ಪ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸಿ.ಮುನಿರಾಜು, ಜಿಪಂ ಮಾಜಿ ಅಧ್ಯಕ್ಷ ಕೆ.ಸಿ.ರಾಮಚಂದ್ರ , ಚಂದಾಪುರ ಪುರಸಭೆ ಅಧ್ಯಕ್ಷ ವಿ.ಶ್ರೀನಿವಾಸ್, ಮುಖಂಡ ಕೃಷ್ಣಾರೆಡ್ಡಿ, ನಟರಾಜ್, ರಾಮು ಮುಂತಾದವರು ಭಾಗವಹಿಸಿದ್ದರು.

Facebook Comments

Sri Raghav

Admin