ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವೆ : ಸಿ.ಪಿ.ಯೋಗೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

CPYogishwar

ಮದ್ದೂರು,ಆ.29- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.   ತಾಲ್ಲೂಕಿನ ಮದನಾಯಕನಹಳ್ಳಿ ಸಿದ್ದರಾಮೇಶ್ವರ ಸ್ವಾಮೀ ಮಹಾಕುಂಭಾಬಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಹಾಗೂ ಮದ್ದೂರು ಕ್ಷೇತ್ರ ಭೌಗೋಳಿಕವಾಗಿ ಒಂದೇ ಸಮನ್ವಯ ಹೊಂದಿದ್ದು ಚನ್ನಪಟ್ಟಣ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ಮದ್ದೂರು ಕ್ಷೇತ್ರದ ಜನತೆ ಇಲ್ಲಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು.   ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಹಾಗೂ ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಬೇರೆ ಪಕ್ಷದಿಂದ ಸ್ಪರ್ದೆ ಗೆದ್ದಿದ್ದೇನೆ. ಅಭಿವೃದ್ಧಿ ಕೆಲಸಗಳಿಂದ ಆ ಕ್ಷೇತ್ರದ ಜನರು ಖುಷಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಹಿಂದ ತತ್ವ ಆಧಾರದ ಮೇಲೆ ನಂಬಿಕೆ ಇಟ್ಟು ಕಾಂಗ್ರೆಸ್ಗೆ ಬೆಂಬಲ ನೀಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin