ವಿಧಾನಸಭೆಯಲ್ಲಿ ನೋಟ್ ಬ್ಯಾನ್ ಗದ್ದಲ : ಬಿಜೆಪಿ-ಕಾಂಗ್ರೆಸ್ ಶಾಸಕರ ವಾಗ್ವಾದ

ಈ ಸುದ್ದಿಯನ್ನು ಶೇರ್ ಮಾಡಿ

Session---n--063'jhbvg'

ಬೆಂಗಳೂರು,ಫೆ.8-ಗರಿಷ್ಠ ಮುಖಬೆಲೆಯ ನೋಟು ಅಮಾನೀಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ಬಿಜೆಪಿ ಶಾಸಕರ ನಡುವೆ ವಾಗ್ವಾದ ನಡೆದ ಪ್ರಸಂಗ ವಿಧಾನಸಭೆಯಲ್ಲಿಂದು ಜರುಗಿತು.   ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸದಸ್ಯ ರಾಜಣ್ಣ, ನೋಟು ಅಮಾನೀಕರಣದಿಂದ ರೈತರಿಗೆ ತೊಂದರೆಯಾಗುತ್ತಿದೆ. ಸಕಾಲದಲ್ಲಿ ಸಾಲ ಸಿಗುತ್ತಿಲ್ಲ. ಅಲ್ಲದೆ ಎಲ್ಲವನ್ನು ಚೆಕ್ ಮೂಲಕ ವ್ಯವಹರಿಸಲು ಆಗುವುದಿಲ್ಲ. ತರಕಾರಿ ಮಾರುವವರು ಚೆಕ್ ಬಳಸಲು ಆಗುತ್ತದೆಯೇ ಎಂದು ಪ್ರಶ್ನಿಸುತ್ತಿದ್ದಂತೆ ಬಿಜೆಪಿಯ ಶಾಸಕ ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿ ಇನ್ನು ಮುಂದೆ ಬ್ಲಾಕ್ ಮನಿ ವ್ಯವಹಾರ ನಡೆಯುವುದಿಲ್ಲ. ನಿನ್ನೆ ಪ್ರಧಾನಿಯವರ ಉತ್ತರವೇ ಇದಕ್ಕೆ ಸಾಕ್ಷಿ ಎಂದ ಅವರು, ಚೆಕ್ ಮೂಲಕವೆ ವ್ಯವಹಾರ ನಡೆಸಬೇಕು. ನಾನು ಮಾಡುತ್ತೇನೆ. ನೀವು ಹಾಗೆ ಮಾಡಿ ಮತ್ತೆ ಪ್ರಸ್ತಾಪದ ಅಗತ್ಯವಿಲ್ಲ ಎಂದು ಛೇಡಿಸಿದರು.

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ರಾಜ್ಯಪಾಲರ ಭಾಷಣದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿಲ್ಲ. ಡಿಜಿಟಲ್ ವ್ಯವಹಾರಕ್ಕೆ ಸಿದ್ದರಾಗಬೇಕು ಎಂದಾಗ, ಆಡಳಿತ ಮತ್ತು ಬಿಜೆಪಿ ಶಾಸಕರ ನಡುವೆ ಏರುದನಿಯಲ್ಲಿ ಮಾತಿನ ಚಕಮಕಿ ನಡೆಯಿತು.   ಈ ಮಧ್ಯೆ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಉಭಯ ಶಾಸಕರನ್ನು ಸಮಾಧಾನಪಡಿಸಲು ಯತ್ನಿಸಿದರು.  ಕೈಗಾರಿಕಾ ಸಚಿವ ದೇಶಪಾಂಡೆ ಮಧ್ಯಪ್ರವೇಶಿಸಿ ಮಾತನಾಡಿ, ರಾಜ್ಯಪಾಲರ ಭಾಷಣದಲ್ಲಿ ಎಲ್ಲವನ್ನೂ ಹೇಳಿಸಲು ಸಾಧ್ಯವಿಲ್ಲವೆಂದು ತಿರುಗೇಟು ನೀಡಿದರು. ಮಾತು ಮುಂದುವರೆಸಿದ ರಾಜಣ್ಣ , ನೋಟು ಅಮಾನೀಕರಣದ ಬಗ್ಗೆ ಪ್ರಸ್ತಾಪಿಸುತ್ತಿಲ್ಲ. ಗರಿಷ್ಠ ಮುಖಬೆಲೆಯ ನೋಟು ರದ್ದಾದ ನಂತರ ಆಗಿರುವ ಅನಾನುಕೂಲತೆಗಳ ಬಗ್ಗೆ ಪ್ರಸ್ತಾಪಿಸಿದ್ದೇನೆಂದು ಸ್ಪಷ್ಟನೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin