ವಾಟಾಳ್, ಸಾ.ರಾ.ಗೋವಿಂದು,ಪ್ರವೀಣ್‍ಶೆಟ್ಟಿ ಸೇರಿ 70ಮಂದಿ ಪೊಲೀಸ್ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Vatal-Arrest

ಬೆಂಗಳೂರು, ಜೂ.12-ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಪ್ರತಿಭಟನಾನಿರತ ವಾಟಾಳ್ ಪಕ್ಷದ ವಾಟಾಳ್‍ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ಅಧ್ಯಕ್ಷ ಪ್ರವೀಣ್‍ಶೆಟ್ಟಿ ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. [ ಇದನ್ನೂ ಓದಿ : ಬಂದ್ ಯಶಸ್ವಿಯಾಗದಂತೆ ರಾಜ್ಯ ಸರ್ಕಾರದಿಂದ ವ್ಯವಸ್ಥಿತ ಪಿತೂರಿ, ವಾಟಾಳ್ ಗುಡುಗು ] ಇಂದು ಬೆಳಗ್ಗೆ ಬೆಂಬಲಿಗರೊಂದಿಗೆ ವಾಟಾಳ್ ನಾಗರಾಜ್ ಅವರು ವಿಧಾನಸೌಧ ಮುತ್ತಿಗೆ ಹಾಕಲು ಕಾರ್ಯಕರ್ತರೊಂದಿಗೆ ಹೋಗುತ್ತಿದ್ದಾಗ  ಪೊಲೀಸರು ಕಾರ್ಪೊರೇಷನ್ ವೃತ್ತದ ಎನ್.ಆರ್.ಸ್ಕ್ವೇರ್ ಬಳಿ ಇವರನ್ನು ತಡೆದು ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ಕುಮಾರ್ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಪ್ರವೀಣ್‍ಶೆಟ್ಟಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಮೇಖ್ರಿ ವೃತ್ತದಲ್ಲಿ ಇವರನ್ನು ತಡೆದ ಪೊಲೀಸರು ಪ್ರವೀಣ್‍ಶೆಟ್ಟಿ ಮತ್ತು ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.  ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತಿದ್ದ 50ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.  [ ಇದನ್ನೂ ಓದಿ : ಕರ್ನಾಟಕ ಬಂದ್ (Live Updates) ]

Vatal-Nagaraj--01

ನೋಟೀಸ್ ಜಾರಿ  : 
ಬೆಂಗಳೂರು, ಜೂ.12-ಬಯಲುಸೀಮೆಗೆ ಶಾಶ್ವತ ನೀರಾವರಿ, ರೈತರ ಸಾಲ ಮನ್ನಾ, ಕಳಸಾ ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಕರೆ ನೀಡಿರುವ ಬಂದ್‍ಗೆ ಅವಕಾಶವಿಲ್ಲ ಎಂದು ಉತ್ತರ ವಿಭಾಗದ ಡಿಸಿಪಿ ಲಾಬೂರಾಮ್ ಅವರು ಕರವೇ ರಾಜ್ಯಾಧ್ಯಕ್ಷ ಪ್ರವೀಣ್‍ಶೆಟ್ಟಿಗೆ ನೋಟೀಸ್ ನೀಡಿದ್ದಾರೆ.

‘ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಒಂದು ವೇಳೆ ಯಾವುಆದರೂ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಬಂದ್‍ಗೆ ಕರೆ ನೀಡಿರುವ ಹೋರಾಟಗಾರರೇ ಜವಾಬ್ದಾರಿ ಎಂದು ನೋಟೀಸ್‍ನಲ್ಲಿ ತಿಳಿಸಲಾಗಿದೆ.  ರಾಜಧಾನಿ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಬಂದ್‍ಗೆ ಭಾಗಶಃ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin