ವಿಧಾನ ಪರಿಷತ್ ಸದಸ್ಯರ ಧರಣಿಗೆ ಕುಮಾರಸ್ವಾಮಿ ಬೆಂಬಲ

ಈ ಸುದ್ದಿಯನ್ನು ಶೇರ್ ಮಾಡಿ

Parishat

ಬೆಂಗಳೂರು, ಸೆ.9- ಖಾಸಗಿ ಅನುದಾನಿತ-ಅನುದಾನ ರಹಿತ ಶಾಲಾ ಶಿಕ್ಷಕರ ಆಡಳಿತ ಮಂಡಳಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಪಕ್ಷಾತೀತವಾಗಿ ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿರುವ ಧರಣಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ. ಇಂದು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರೆ ತೊಂದರೆಯಾಗುತ್ತಿತ್ತು. ಇದನ್ನು ಅರಿತು ಶಿಕ್ಷಕರು ಪತತ್ತು ಪದವೀಧರ ಕ್ಷೇತ್ರದ ಜನಪ್ರತಿನಿಧಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸರ್ಕಾರ ಕೂಡಲೇ ಧರಣಿ ನಿರತರೊಂದಿಗೆ ಮಾತುಕತೆ ನಡೆಸಿ ಎಷ್ಟು ಸಾಧ್ಯವೋ ಅಷ್ಟು ಸಮಸ್ಯೆಗಳನ್ನು ಬಗೆಹರಿಸಬೇಕು. ಉಳಿದ ಸಮಸ್ಯೆಗಳನ್ನು ಬಗೆಹರಿಸಲು ಭರವಸೆ ನೀಡಬೇಕು. ಅದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ 15ರಂದು ಸಭೆ ನಡೆಸುವುದಾಗಿ ಉಡಾಫೆಯ ಹೇಳಿಕೆ ನೀಡಿದ್ದಾರೆ. ಸರ್ಕಾರಕ್ಕೆ ಇಚ್ಛಾಶಕ್ತಿ ಕೊರತೆ ಇದೆ ಎಂದು ಆರೋಪಿಸಿದರು.

Facebook Comments

Sri Raghav

Admin