ವಿನಮ್ರವಾಗಿ ಜೆಡಿಎಸ್ ಆಫರ್ ನಿರಾಕರಿಸಿದ ನಿರ್ಮಾಪಕ ಕೆ.ಮಂಜು

ಈ ಸುದ್ದಿಯನ್ನು ಶೇರ್ ಮಾಡಿ

Devegowda--01
ಬೆಂಗಳೂರು, ಏ.24- ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ನಿರ್ಮಾಪಕ ಕೆ.ಮಂಜು ಅವರು ಜೆಡಿಎಸ್ ಪಕ್ಷದ ಆಫರ್‍ಅನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೆ.ಮಂಜು ಅವರನ್ನು ಬೊಮ್ಮನಹಳ್ಳಿಯಿಂದ ಸ್ಪರ್ಧಿಸುವಂತೆ ಸೂಚಿಸಿದ್ದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಜೆಡಿಎಸ್‍ನಿಂದ ಬೊಮ್ಮನಹಳ್ಳಿಯಿಂದ ಸ್ಪರ್ಧಿಸಿದರೆ ಅನುಕೂಲವಾಗಲಿದೆ ಎಂಬುದು ದೇವೇಗೌಡರ ಅಭಿಲಾಷೆಯಾಗಿತ್ತು.

ಆದರೆ, ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವುದರಿಂದ ಪಕ್ಷ ಮುನ್ನಡೆಸಲು ಕಷ್ಟಸಾಧ್ಯವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಕೆ.ಮಂಜು ಅವರು ದೇವೇಗೌಡರ ಸೂಚನೆಯನ್ನು ಅತ್ಯಂತ ವಿನಮ್ರವಾಗಿ ನಿರಾಕರಿಸಿದ್ದಾರೆ. ದೇವೇಗೌಡರು ನಮ್ಮ ಮೇಲೆ ಇಟ್ಟ ಅಭಿಮಾನಕ್ಕೆ ಚಿರಋಣಿಯಾಗಿದ್ದೇನೆ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗದಿರುವುದಕ್ಕೆ ಬೇಸರವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin