ವಿನಾಶದತ್ತ ಕಾಂಗ್ರೆಸ್ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

yaddyurappa

ಮೈಸೂರು,ಆ.22- ಸೇನೆ ವಿರುದ್ಧ ಘೋಷಣೆ ಕೂಗಿದವರನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ವಿನಾಶ ಸಮೀಪಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನುಡಿದರು.ನಗರದ ತಿರಂಗಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರನ್ನು ಭೇಟಿಯಾದ ಸುದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿ ಹೇಳಿಕೆ ನೀಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಎಬಿವಿಪಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ದೂರಿದರು.
ವಿನಾಶಕಾಲೆ ವಿಪರೀತ ಬುದ್ದಿ ಎನ್ನುವಂತೆ ಆಮ್ನೆಸ್ಟಿ ಪರವಾಗಿ ಹೇಳಿಕೆ ನೀಡುವ ಕಾಂಗ್ರೆಸ್‍ನವರಿಗೆ ಚರಿತ್ರೆಯಿಂದ ಇನ್ನೂ ಬುದ್ದಿ ಬಂದಿಲ್ಲ ಎಂದು ಟೀಕಿಸಿದ ಯಡಿಯೂರಪ್ಪ, ತಾವು ಆಡುವ ಮಾತಿನ ಪರಿಣಾಮವನ್ನು ಗೃಹ ಸಚಿವರು ಚಿಂತಿಸಬೇಕೆಂದು ಕುಟುಕಿದರು.

 

► Follow us on –  Facebook / Twitter  / Google+

Facebook Comments

Sri Raghav

Admin