ವಿಮಾನ ಹೈಜಾಕ್ ಬೆದರಿಕೆ : ಮುಂಬೈ, ಚೆನ್ನೈ, ಹೈದರಾಬಾದ್ ಏರ್‍ಪೋರ್ಟ್‍ಗಳಲ್ಲಿ ಹೈಅಲರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Sirport--01

ಮುಂಬೈ, ಏ.16- ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ಏರ್‍ಪೋರ್ಟ್‍ಗಳಿಂದ ಏಕಕಾಲದಲ್ಲಿ ವಿಮಾನಗಳನ್ನು ಅಪಹರಣ ಮತ್ತು ಬಾಂಬ್ ದಾಳಿ ಸಾಧ್ಯತೆ ಮಾಹಿತಿ ಹಿನ್ನೆಲೆಯಲ್ಲಿ ವಿಮಾನನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.   ಸುಮಾರು 23 ಅಪಹರಣಕಾರರ ತಂಡವೊಂದು ವಿಮಾನಗಳನ್ನು ಹೈಜಾಕ್ ಮಾಡಲು ಸಂಚು ರೂಪಿಸಿದ್ದಾರೆ ಹಾಗೂ ಬಾಂಬ್ ದಾಳಿ ನಡೆಸಲಿದ್ದಾರೆ ಎಂಬ ಇ-ಮೇಲ್ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ವಿಮಾನನಿಲ್ದಾಣಗಳಲ್ಲಿ ಹದ್ದಿನ ಕಣ್ಣಿನ ನಿಗಾ ಇಟ್ಟಿವೆ. ಅಲ್ಲದೇ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳ ಏರ್‍ಪೋರ್ಟ್‍ಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.

ವಿಮಾನಗಳ ಅಪಹರಣ ಸಾಧ್ಯತೆ ಆತಂಕದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮುಂಬೈನಲ್ಲಿ ವಿಮಾನನಿಲ್ಧಾಣ ಭದ್ರತಾ ಸಮನ್ವಯ ಸಮಿತಿ ಸಭೆ ನಡೆಯಿತು.
ಈ ಮೂರು ವಿಮಾನನಿಲ್ದಾಣಗಳಿಂದ ಯಾನ ಮಾಡುವ ಪ್ರಯಾಣಿಕರನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಲು ಹಾಗೂ ಕೊನೆ ಕ್ಷಣದಲ್ಲಿ ಚೆಕ್-ಇನ್ ವೇಳೆ ಗೊಂದಲಕ್ಕೆ ಒಳಗಾಗುವುದನ್ನು ತಪ್ಪಿಸಲು ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ. ಏರ್‍ಪೋರ್ಟ್‍ಗಳಲ್ಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸುವಂತೆ ತಿಳಿಸಲಾಗಿದೆ.

ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ವಿಮಾನನಿಲ್ದಾಣಗಳಲ್ಲಿ ಏಕಕಾಲದಲ್ಲಿ ವಿಮಾನಗಳನ್ನು ಹೈಜಾಕ್ ಮಾಡಲು ಯೋಜನೆ ರೂಪಿಸುತ್ತಿರುವ ಬಗ್ಗೆ ಆರು ಯುವಕರು ಚರ್ಚಿಸುತ್ತಿದ್ದರು ಎಂದು ಮಹಿಳೆಯೊಬ್ಬಳು ಇ-ಮೇಲೆ ಸಂದೇಶ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ ಎಂದು ಭದ್ರತಾ ಸಂಸ್ಥೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.   ಒಟ್ಟು 23 ಜನರ ತಂಡವು ಮೂರು ಗುಂಪುಗಳಾಗಿ ಇಂದು ಮೂರು ವಿಮಾನಗಳನ್ನು ಅಪಹರಿಸಲು ಹುನ್ನಾರ ನಡೆಸಿದ್ದ ಬಗ್ಗೆ ಮಾಹಿತಿ ಲಭಿಸಿದೆ ಎಂದು ಇನ್ನೊಂದು ಮೂಲ ತಿಳಿಸಿದೆ.

ಈ ಮೂರು ವಿಮಾನನಿಲ್ದಾಣಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಹಾಗೂ ಏರ್‍ಪೋರ್ಟ್‍ಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಲಾಗಿದೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ಮಹಾ ನಿರ್ದೇಶಕ ಒ.ಪಿ.ಸಿಂಗ್ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin