ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ

ಈ ಸುದ್ದಿಯನ್ನು ಶೇರ್ ಮಾಡಿ

kohli--01

ಬೆಂಗಳೂರು, ಏ. 26- ಆರ್‍ಸಿಬಿ ನಾಯಕ ವಿರಾಟ್ ಕೊಹ್ಲಿಗೆ ಐಪಿಎಲ್ ಮಂಡಳಿ 12 ಲಕ್ಷ ರೂ. ದಂಡ ವಿಧಿಸಿದೆ. ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಹಿನ್ನೆಲೆಯಲ್ಲಿ ಈ ದಂಡ ವಿಧಿಸಲಾಗಿದೆ.  ಐಪಿಎಲ್ 11ರಲ್ಲಿ ಆರ್‍ಸಿಬಿ ತಂಡದಿಂದ ಇದೇ ಮೊದಲ ಬಾರಿಗೆ ನಿಧಾನಗತಿಯ ಬೌಲಿಂಗ್ ಮಾಡಿರುವುದರಿಂದ ದಂಡ ವಿಧಿಸಲಾಗಿದ್ದು ಮುಂದಿನ ಪಂದ್ಯಗಳಲ್ಲೂ ಇದೇ ರೀತಿಯಾದರೆ ನಾಯಕ ಕೊಹ್ಲಿಯನ್ನು ಒಂದು ಪಂದ್ಯದಿಂದ ಹೊರಗಿಡಲಾಗುವುದು ಎಂದು ಐಪಿಎಲ್ ಮೂಲಗಳು ತಿಳಿಸಿವೆ. ಆರ್‍ಸಿಬಿ ನೀಡಿದ 205 ರನ್‍ಗಳ ಗುರಿಯನ್ನು ಬೆನ್ನಟ್ಟಿದ ಜಯ ಸಾಧಿಸಿದ ಸಿಎಸ್‍ಕೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin