ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ : ಏರ್ ಚೀಫ್ ತ್ಯಾಗಿಗೆ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

Tyagi

ನವದೆಹಲಿ, ಡಿ.26- ಆಗಸ್ಟಾ ವೆಸ್ಟ್‍ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಗುತ್ತಿಗೆ ಭ್ರಷ್ಟಾಚಾರ ಹಗರಣದ ಸಂಬಂಧ ಡಿ.9ರಂದು ಬಂಧನಕ್ಕೆ ಒಳಗಾಗಿದ್ದ ಭಾರತೀಯ ವಾಯು ವಾಯುಪಡೆ (ಐಎಎಫ್) ಮಾಜಿ ಮುಖ್ಯಸ್ಥ ಎಸ್.ಪಿ.ತ್ಯಾಗಿ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.   ಸಿಬಿಐ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, 2 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಖಾತರಿ ಮೇರೆಗೆ ತ್ಯಾಗಿ ಅವರಿಗೆ ಜಾಮೀನು ಮಂಜೂರು ಮಾಡಿದರು. ಇದರಿಂದ ಈ ಹಗರಣ ಕುರಿತ ಸಿಬಿಐ ತನಿಖೆಗೆ ಕೊಂಚಮಟ್ಟಿಗೆ ಹಿನ್ನಡೆಯಾಗಿದೆ.

ತ್ಯಾಗಿ ಅವರಿಗೆ ಜಾಮೀನು ನೀಡಿರುವ ನ್ಯಾಯಾಲಯವು ಕೆಲವೊಂದು ಷರತ್ತುಗಳನ್ನು ಸಹ ವಿಧಿಸಿದೆ. ಈ ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ತನಿಖೆಗೆ ಧಕ್ಕೆ ಉಂಟು ಮಾಡಬಾರದು. ಅಲ್ಲದೇ ಅನುಮತಿ ಇಲ್ಲದೇ ದೆಹಲಿಯಿಂದ ಹೊರ ಹೋಗದಂತೆ ನಿಬಂಧನೆಗಳನ್ನು ವಿಧಿಸಿದೆ.  ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ತ್ಯಾಗಿ ಸಂಬಂಧಿ ಸಂಜೀವ್ ತ್ಯಾಗಿ ಮತ್ತು ವಕೀಲ ಗೌತಮ್ ಖೇತಾನ್ ಅವರ ಜಾಮೀನು ಅರ್ಜಿಗಳನ್ನು ಕೋರ್ಟ್ ಬಾಕಿ ಇರಿಸಿದ್ದು, ಜನವರಿ 4ರಂದು ಈ ಎರಡು ಮನವಿಗಳ ಬಗ್ಗೆ ನಿರ್ಧಾರ ಪ್ರಕಟಿಸಲಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin