ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ 

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮಾ.15– ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿ 1.10 ಲಕ್ಷ ರೂ. ಬೆಲೆಯ ಚಿನ್ನಾಭರಣ ಹಾಗೂ ಸ್ಕೂಟರ್‍ನ್ನು ವಶಪಡಿಸಿಕೊಂಡಿದ್ದಾರೆ.ನಗರದ ಕುಂಬಾರಕೊಪ್ಪಲಿನ ಚಂದನ್ (24) ಹಾಗೂ ಹೊಟಗಳಿಯ ಮಂಜ (26) ಬಂಧಿತ ಆರೋಪಿಗಳು.ನಿನ್ನೆ ಈ ಇಬ್ಬರು ಆರೋಪಿಗಳು ಹೂಟಗಳ್ಳಿಯಲ್ಲಿ ಚಿನ್ನದ ಸರ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ವಿಜಯನಗರ ಠಾಣೆ ಪೊಲೀಸರು ಅನುಮಾನದಿಂದ ಇವರನ್ನು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದರು.ಹುಣಸೂರು ಪಟ್ಟಣದಲ್ಲಿ ಫೆಬ್ರವರಿಯಲ್ಲಿ ಮಹಿಳೆಯೊಬ್ಬರ ಸರ ಅಪಹರಿಸಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಮಂಜನ ವಿರುದ್ಧ ಮೈಸೂರು ನಗರ, ಶ್ರೀರಂಗಪಟ್ಟಣ, ಟಿ.ನರಸೀಪುರ ಪೊಲೀಸ್ ಠಾಣೆಗಳಲ್ಲಿ 23 ಸರಗಳ್ಳತನ ಪ್ರಕರಣ ದಾಖಲಾಗಿವೆ ಎಂಬುದು ಗೊತ್ತಾಗಿದೆ.ವಿಜಯನಗರ ಠಾಣೆ ಇನ್ಸ್‍ಪೆಕ್ಟರ್ ಗುರುಪ್ರಸಾದ್, ಎಎಸ್‍ಪಿಗಳಾದ ಕೃಷ್ಣ, ಧನರಾಜ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin