ವಿವಿಧ ಗ್ರಾ.ಪಂ.ಗಳಲ್ಲಿ ಶಾಂತಿಯುತ ಮತದಾನ

ಈ ಸುದ್ದಿಯನ್ನು ಶೇರ್ ಮಾಡಿ

VIJAYAPURA HOTE

ವಿಜಯಪುರ, ಆ.29- ಚನ್ನರಾಯಪಟ್ಟಣ ಹೋಬಳಿಯ ಚನ್ನರಾಯಪಟ್ಟಣ, ನಲ್ಲೂರು, ಗ್ರಾಮಪಂಚಾಯ್ತಿಗಳ ಚುನಾವಣೆಯಲ್ಲಿ ಶೇ.90ರಷ್ಟು ಶಾಂತಿಯುತ ಮತದಾನ ನಡೆದಿದೆ.ತಹಸೀಲ್ದಾರ್ ನಾರಾಯಣಸ್ವಾಮಿ, ಚನ್ನರಾಯಪಟ್ಟಣ ಸಬ್ ಇನ್ಸ್‍ಪೆಕ್ಟರ್ ಕೃಷ್ಣಕುಮಾರ್ ಎರಡೂ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳಿಗೆ ಭೇಟಿ ನೀಡಿ ಸಂಪೂರ್ಣ ಬಂದೋಬಸ್ತ್ ಏರ್ಪಡಿಸಿದ್ದರು.

 

ಜೆಡಿಎಸ್‍ನ ಶಾಸಕ ಪಿಳ್ಳ ಮುನಿಶಾಮಪ್ಪ, ಕಾರ್ಯದರ್ಶಿ ರವೀಂದ್ರ, ಬಮೂಲ್‍ನ ಮಾಜಿ ನಿರ್ದೇಶಕ ದಂಡಿಗಾನಹಳ್ಳಿ ನಾರಾಯಣಸ್ವಾಮಿ, ಕಾಂಗ್ರೆಸ್‍ನ ಮಾಜಿ ಶಾಸಕ ವೆಂಕಟಸ್ವಾಮಿ, ಬೂದಿಗೆರೆ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸಗೌಡ, ಬೆಂಗ್ರಾ ಜಿಲ್ಲಾ ಪಂಚಾಯ್ತಿ ಸದಸ್ಯ ಲಕ್ಷ್ಮಿನಾರಾಯಣಪ್ಪ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭಾರತಿ ಲಕ್ಷ್ಮಣಗೌಡ ಹಕ್ಕು ಚಲಾಯಿಸಿದರು.
ಚನ್ನರಾಯಪಟ್ಟಣ, ನಲ್ಲೂರು, ಗ್ರಾಮಪಂಚಾಯ್ತಿಗಳು ಜೆಡಿಎಸ್ ಆಡಳಿತಕ್ಕೊಳಪಟ್ಟಿದ್ದು, ಇದೀಗ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪೈಪೋಟಿ ಯನ್ನು ಎದುರಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧಿಸಿರುವುದು ಹೆಚ್ಚು ಕುತೂಹಲ ಮೂಡಿಸಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin