ವಿಶೇಷ ಪ್ಯಾಕೇಜ್‍ಗೆ ಆಗ್ರಹಿಸಿ 21ಕ್ಕೆ ಸಂಸದ ಅನಂತ್‍ಕುಮಾರ್ ಕಚೇರಿ ಮುಂದೆ ಧರಣಿ

ಈ ಸುದ್ದಿಯನ್ನು ಶೇರ್ ಮಾಡಿ

puttanayya

ಬೆಂಗಳೂರು, ಜ.19 – ತೀವ್ರ ಬರಗಾಲಕ್ಕೆ ತುತ್ತಾಗಿ ತತ್ತರಿಸು ತ್ತಿರುವ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಕೇಂದ್ರ ಸಚಿವ ಹಾಗೂ ಸಂಸದ ಅನಂತ್‍ಕುಮಾರ್ ಅವರ ಬೆಂಗಳೂರಿನ ಕಚೇರಿ ಮುಂದೆ ಜ.21ರಂದು ಧರಣಿ ನಡೆಸಲಾಗುವುದು ಎಂದು ಶಾಸಕ ಹಾಗೂ ಜನಾಂದೋಲನಗಳ ಮಹಾಮೈತ್ರಿ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದರು.  ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಾ ರಾಷ್ಟ್ರದ ವಿದರ್ಭ ಸೇರಿದಂತೆ ರಾಷ್ಟ್ರದ ವಿವಿಧ ರಾಜ್ಯಗಳಿಗೆ ವಿಶೇಷ ಪ್ಯಾಕೇಜ್ ನೀಡಿರುವ ನಿದರ್ಶನವಿದ್ದು, ನಮ್ಮ ರಾಜ್ಯಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕೆಂದು ಒತ್ತಾಯಿಸಿದರು. ಬೆಳೆನಷ್ಟ ಸೇರಿದಂತೆ ವಿವಿಧ ರೀತಿಯ ಸಮಸ್ಯೆಗೆ ಸಿಲುಕಿರುವ ರೈತರ ನೆರವಿಗೆ ವಿಶೇಷ ಪ್ಯಾಕೇಜ್ ಅಗತ್ಯವಿದೆ. ಕಳೆದ 3 ತಿಂಗಳಿನಿಂದ ರೈತರ ಹಿತರಕ್ಷಣೆಗಾಗಿ ಆಂದೋಲನ ನಡೆಸಲಾಗುತ್ತಿದೆ. ರಾಜ್ಯದ ವಿವಿಧ ಸಂಸದ ಕಚೇರಿ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸುವ ಪ್ರಕ್ರಿಯೆಯು ನಡೆಯುತ್ತಿದೆ.

ಭೀಕರ ಬರದಿಂದಾಗಿ ರಾಷ್ಟ್ರಕ್ಕೆ ಅನ್ನ ನೀಡುವ ರೈತ ಸಮುದಾಯದ ಪರಿಸ್ಥಿತಿ ದಯನೀಯವಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ಧಾವಿಸಬೇಕೆಂದು ಕೋರಿದರು. ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವಂತೆ ರೈತರಿಗೂ ವೇತನ ಆಯೋಗ ಸ್ಥಾಪಿಸಬೇಕು, ಯೋಗ್ಯ ಬೆಲೆ ನೀಡುವ ನೀತಿಯನ್ನು ರೂಪಿಸಬೇಕು. ಬರ ಪರಿಹಾರ ಕಾರ್ಯಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೆಳಗಾವಿ ಅಧಿವೇಶನದಲ್ಲಿ ರೈತರ ಪರವಾಗಿ ಖಾಸಗಿ ನಿರ್ಣಯ ಮಂಡಿಸಿದಂತೆ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಾಗಿ ಪುಟ್ಟಣ್ಣಯ್ಯ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin