ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi--02

ನ್ಯೂಯಾರ್ಕ್, ಮಾ. 29- ವಿಶ್ವದ ಪ್ರಭಾವಿ ವ್ಯಕ್ತಿಗಳ ಸಾಲಿಗೆ ಪ್ರಧಾನಮಂತ್ರಿ ನರೇಂದ್ರಮೋದಿ ಸೇರ್ಪಡೆಯಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್, 4ನೆ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಮೈಕ್ರೋ ಸಾಫ್ಟ್ ಸಂಸ್ಥೆ ಮುಖ್ಯಸ್ಥ ಸತ್ಯ ನಾದೆಲ್ಲಾ, ಚೈನಾ ಅಧ್ಯಕ್ಷ ಜಿಂಗ್ ಪಿಂಗ್ ವಿಶ್ವದ ಪ್ರಭಾವಿ ವ್ಯಕ್ತಿಗಳಾಗಿ ಗುರುತಿಸಿಕೊಂಡಿದ್ದಾರೆ. ಟೈಮ್ಸ್ ಮ್ಯಾಗ್‍ಜಿನ್ ಬಿಡುಗಡೆ ಮಾಡಿರುವ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಸಾಲಿನಲ್ಲಿ ಪ್ರಧಾನಿ ಮೋದಿ ಸ್ಥಾನ ಪಡೆದುಕೊಂಡಿದ್ದಾರೆ.  ಜಾಗತಿಕ ವಿದ್ಯಮಾನಗಳ ಮೇಲೆ ವಿಶ್ವ ಮುಖಂಡರ ಕೊಡುಗೆಯನ್ನಾಧರಿಸಿ ಈ ಪ್ರಭಾವಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ವಿಶ್ವದ ಖ್ಯಾತ ಕಲಾವಿದರು, ವಿಜ್ಞಾನಿಗಳು, ಗಣ್ಯರು, ವಾಣಿಜ್ಯೋದ್ಯಮಿಗಳನ್ನು ಒಳಗೊಂಡಿರುವ ವಿಶ್ವ 100 ಪ್ರಭಾವಿಗಳ ಪಟ್ಟಿ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

Facebook Comments

Sri Raghav

Admin