ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಎದುರಾಯ್ತು ಮತ್ತೊಂದು ವಿಘ್ನ

ಈ ಸುದ್ದಿಯನ್ನು ಶೇರ್ ಮಾಡಿ

vishnu

ಮೈಸೂರು,ಫೆ.20– ಅದೇಕೋ ಏನೋ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಪದೇ ಪದೇ ವಿಘ್ನಗಳು ಎದುರಾಗುತ್ತಲೇ ಇವೆ. ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಮಾಡಿದ ಪ್ರಯತ್ನ ವಿಫಲವಾಗಿ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ಮುಂದಾಗಿದ್ದ ಪ್ರಯತ್ನಕ್ಕೂ ಅಡ್ಡಿಯಾಗಿದೆ.   ಮೈಸೂರಿನ ಎಚ್.ಡಿ.ಕೋಟೆ ರಸ್ತೆಯ ಹಾಲಾಳುವಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣವಾಗುತ್ತಿತ್ತು. ಈ ಪ್ರದೇಶದಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ರೈತರು ತಗಾದೆ ತೆಗೆದಿದ್ದರು. ಮಾತುಕತೆ ನಡೆಸಿ ಕಾಮಗಾರಿ ಮುಂದುವರೆಸಲಾಗಿತ್ತು.  ಆದರೆ ಈಗ ರೈತರು ಕಾಮಗಾರಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕಾನೂನು ಹೋರಾಟಕ್ಕಿಳಿಯುವ ಮೂಲಕ ಸ್ಮಾರಕಕ್ಕೆ ಮತ್ತೊಂದು ವಿಘ್ನ ಎದುರಾಗಿದೆ.   ಮೈಸೂರು ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿದೆ. ಕೋರ್ಟ್ ಆದೇಶದಂತೆ ವಿಷ್ಣು ಸ್ಮಾರಕ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin