ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ
ಈ ಸುದ್ದಿಯನ್ನು ಶೇರ್ ಮಾಡಿ
ಉಡುಪಿ,ಅ.17-ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ದುರಾದೃಷ್ಟವಶಾತ್ ಮಕ್ಕಳು ಸಾವನ್ನಪ್ಪಿದ್ದು , ದಂಪತಿ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ಅಶ್ವಿನ್ಕುಮಾರ್(16), ಐಶ್ವರ್ಯ ಹೆಬ್ಬಾರ್(14) ಮೃತಪಟ್ಟ ಮಕ್ಕಳು. ಇಂದು ಬೆಳಗ್ಗೆ ಬೈಂದೂರು ಬಳಿಯ ಗಂಗನಾಡು ಎಂಬಲ್ಲಿ ದಂಪತಿ ಮತ್ತು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು , ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ತಂದೆತಾಯಿ ಸಾವಿನ ದವಡೆಯಿಂದ ಪಾರಾಗಿದ್ದು , ಕುಂದಾಪುರದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂಬುದ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
► Follow us on – Facebook / Twitter / Google+
Facebook Comments