ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಶಿಫಾರಸ್ಸು : ಅಡ್ಡಗೋಡೆ ಮೇಲೆ ದೀಪವಿಟ್ಟ ರಾಜ್ಯ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

Lingayata--011

ಬೆಂಗಳೂರು, ಮಾ.19-ಬಸವ ತತ್ವ ಒಪ್ಪುವಂತಹ ವೀರಶೈವ ಲಿಂಗಾಯತರಿಗೆ ಸ್ವತಂತ್ರ ಧರ್ಮ ಮಾನ್ಯತೆ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಇಂದು ನಡೆದ ಮಹತ್ವದ ಸಭೆಯಲ್ಲಿ ನ್ಯಾ.ನಾಗಮೋಹನ್‍ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿಯ ಆಧಾರದ ಮೇಲೆ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ.

ಸಚಿವ ಸಂಪುಟ ಸಭೆಯ ನಂತರ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐತಿಹಾಸಿಕ ನಿರ್ಣಯ ಕೈಗೊಂಡಿದ್ದು, ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಸಮಿತಿ ನೀಡಿದ ವರದಿ ಬಗ್ಗೆ ಸಂಪುಟದಲ್ಲಿ ಸಾಕಷ್ಟು ಚರ್ಚೆ ನಡೆಸಿ ಒಮ್ಮತದ ನಿರ್ಣಯ ಕೈಗೊಂಡು ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಯಿತು ಎಂದು ಹೇಳಿದರು.

ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿ, ವೀರಶೈವ ಲಿಂಗಾಯತ ಎರಡೂ ಒಳಗೊಂಡಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಮ್ಮತಿ ಸೂಚಿಸಲಾಗಿದೆ. ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಸ್ಥಾಪನೆಯ ಸಾಧಕ-ಬಾಧಕಗಳನ್ನು ಅಲ್ಪಸಂಖ್ಯಾತರ ಆಯೋಗದ ಮೂಲಕವೇ ಮತ್ತೊಮ್ಮೆ ಮರುಪರಿಶೀಲನೆಗೆ ಕಳುಹಿಸುವಂತೆ ಮನವಿ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

Facebook Comments

Sri Raghav

Admin