ವೃದ್ದಾಶ್ರಮ ತೆರೆಯಲು ಅರ್ಜಿ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಗ್ರಾಮಾಂತರ, ಮೇ 27- ನಿರ್ಗತಿಕ ಹಿರಿಯ ನಾಗರಿಕರಿಗಾಗಿ ಪ್ರತಿ ಜಿಲ್ಲೆಗೆ ಒಂದರಂತೆ ವೃದ್ದಾಶ್ರಮ ತೆರೆಯಲು ಸರ್ಕಾರವು ಆದೇಶಿಸಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವೃದ್ದಾಶ್ರಮವನ್ನು ಪ್ರಾರಂಭಿಸಲು ಅರ್ಹ ನೋಂದಾಯಿತ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೃದ್ದಾಶ್ರಮ ನಡೆಸಲು ಸರ್ಕಾರವು ಅಗತ್ಯ ವಾರ್ಷಿಕ ಅನುದಾನ 8 ಲಕ್ಷ ರೂ. ನಿಗದಿ ಪಡಿಸಲಾಗಿರುತ್ತದೆ. ಆಸಕ್ತ ಸ್ವಯಂಸೇವಾ ಸಂಸ್ಥೆಯವರು ಅರ್ಜಿಯನ್ನು ಅಗತ್ಯ ದಾಖಲೆಗಳೊಡನೆ ಜೂ.20ರೊಳಗೆ ಸಲ್ಲಿಸುವುದು ತದನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಸ್ವಯಂಸೇವಾ ಸಂಸ್ಥೆಗಳಿಗೆ ಇರಬೇಕಾದ ಅರ್ಹತೆಗಳು ಮತ್ತು ಅರ್ಜಿ ನಮೂನೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.080-29787442 ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ.ಸಂ. 080-29787441 ಅನ್ನು ಸಂಪರ್ಕಿಸಬಹುದಾಗಿದೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Facebook Comments