ವೇತನ ನಿಗದಿ, ಕೆಲಸ ಖಾಯಂಗಾಗಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಈ ಸುದ್ದಿಯನ್ನು ಶೇರ್ ಮಾಡಿ

Asha--01

ಬೆಂಗಳೂರು, ಸೆ.7- ಮಾಸಿಕ ವೇತನ ನಿಗದಿ ಮಾಡಬೇಕು, ಕೆಲಸವನ್ನು ಖಾಯಂ ಮಾಡಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದಿನಿಂದ ನಗರದಲ್ಲಿ ಅಹೋರಾತ್ರಿ ಹೋರಾಟ ಪ್ರಾರಂಭಿಸಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ನಗರಕ್ಕೆ ಲಗ್ಗೆಯಿಟ್ಟಿದ್ದು, ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಫ್ರೀಡಂಪಾರ್ಕ್‍ಗೆ ಬಂದು ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ.

Asha--04

ಫ್ರೀಡಂಪಾರ್ಕ್ ಸುತ್ತ ಎಲ್ಲಿ ನೋಡಿದರೂ ಪಿಂಕ್ ಬಣ್ಣದ ಸೀರೆಯುಟ್ಟ ಆಶಾ ಕಾರ್ಯಕರ್ತೆಯರೇ ಕಾಣುತ್ತಿದ್ದಾರೆ. ರಾಜ್ಯಾದ್ಯಂತ ಸಮಯದ ಪರಿವೇ ಇಲ್ಲದೆ ಆರೋಗ್ಯ ಇಲಾಖೆಯ ಸೇವೆಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದೇವೆ. ಆದರೆ, ನಮಗೆ ಅತ್ಯಂತ ಕನಿಷ್ಟ ಸಂಬಳ ನೀಡಲಾಗುತ್ತಿದೆ. ಇದರಿಂದ ಜೀವನ ನಡೆಸುವುದು ದುಸ್ತರವಾಗಿದೆ ಎಂದು ಅವರು ಅಲವತ್ತುಕೊಂಡರು. ಬೇರೆ ರಾಜ್ಯಗಳಲ್ಲಿ ನಿಗದಿತ ಗೌರವಧನ ಜಾರಿ ಮಾಡಿರುವಂತೆ ನಮ್ಮ ರಾಜ್ಯದಲ್ಲೂ ವೇತನ ನಿಗದಿಪಡಿಸಬೇಕು. ಪಿಎಫ್, ಇಎಸ್‍ಐ ಸೌಲಭ್ಯ ನೀಡಬೇಕು. ಕೆಲಸವನ್ನು ಖಾಯಂ ಮಾಡಬೇಕು. ನಿಗದಿತ ಸಮಯಕ್ಕೆ ವೇತನ ನೀಡಬೇಕೆಂದು ಆಶಾ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ. ಒಂದು ವೇಳೆ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Asha--03

Asha--02

Facebook Comments

Sri Raghav

Admin