ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ..!

ಈ ಸುದ್ದಿಯನ್ನು ಶೇರ್ ಮಾಡಿ

Tumakuru--01

ತುಮಕೂರು, ಫೆ.11-ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ನಿನ್ನೆ ಬೆಂಗಳೂರು-ತುಮಕೂರು ರಸ್ತೆಯ ದೊಡ್ಡಬಿದರಕಲ್ಲು ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಎಂಬುವರು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಪಕ್ಷಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಅವರನ್ನು ತಕ್ಷಣವೇ ಡಿಸಿಸಿ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಅವರು ಅಮಾನತು ಮಾಡಿದ್ದಾರೆ.   ಸಾಕಷ್ಟು ವಿರೋಧದ ನಡುವೆಯೂ ತುಮಕೂರು ಜಿಲ್ಲಾಧ್ಯಕ್ಷರಾಗಿ ರಾಮಕೃಷ್ಣಯ್ಯ ಅವರನ್ನು ಡಾ.ಜಿ.ಪರಮೇಶ್ವರ್ ಅವರು ನೇಮಕ ಮಾಡಿದ್ದರು. ತುಮಕೂರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿ ವಾರದಲ್ಲಿ ಎರಡು ದಿನ ತಮ್ಮ ಸ್ವಕ್ಷೇತ್ರ ಕೊರಟಗೆರೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ಭೇಟಿ ನೀಡುತ್ತಿದ್ದರು.

ನಿನ್ನೆ ನಡೆದ ಘಟನೆಯಿಂದ ಪಕ್ಷಕ್ಕೆ ಹಾಗೂ ಅಧ್ಯಕ್ಷರಿಗೆ ತೀವ್ರ ಮುಜುಗರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಅವರನ್ನು ಅಮಾನತು ಮಾಡಿದ್ದಾರೆ.
ವೇಶ್ಯಾವಾಟಿಕೆ ಅಡ್ಡೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ನಿನ್ನೆ ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆ ಸಂದರ್ಭದಲ್ಲಿ ದೊಡ್ಡಬಿದರಕಲ್ಲುನ ವೇಣುಗೋಪಾಲನಗರದಲ್ಲಿ ಹೊಸ ಮನೆಯೊಂದರಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ಹಲವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಎಫ್‍ಐಆರ್ ದಾಖಲಿಸಿರುವ ಪೀಣ್ಯ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Facebook Comments

Sri Raghav

Admin