ವೇಶ್ಯಾವಾಟಿಕೆ ಅಡ್ಡೆಯಲ್ಲೂ ಶುರುವಾಯ್ತು ಕ್ಯಾಶ್ ಲೆಸ್ ವ್ಯವಹಾರ..!

ಈ ಸುದ್ದಿಯನ್ನು ಶೇರ್ ಮಾಡಿ

Cashless

ಬೆಂಗಳೂರು.ಡಿ.17 : ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡಿ ಕ್ಯಾಶ್ ಲೆಸ್ ದೇಶವನ್ನು ನಿರ್ಮಿಸುವ ಕನಸು ಕಾಣುತ್ತಿದೆ. ಇದಕ್ಕೆ ಪೂರಕವಾಗಿ ನಗದು ರಹಿತ ವ್ಯವಹಾರ ಮಾಡುವವರಿಗೆ ವಿಶೇಷ ರಿಯಾಯಿತಿಗಳನ್ನೂ ನೀಡುತ್ತಿದೆ. ನೋಟ್ ಬ್ಯಾನ್ ಎಫೆಕ್ಟ್ ನಿಂದ ಈಗ ಎಲ್ಲರೂ ಕ್ಯಾಶ್ ಲೆಸ್ ವ್ಯವಹಾರ ಮಾಡುತ್ತಿದ್ದಾರೆ. ಅಚ್ಚರಿಯೆನೆಂದರೆ ಈಗ ವೇಶ್ಯಾವಾಟಿಕೆ ಅಡ್ಡೆಯಲ್ಲೂ ಸಹ ಕ್ಯಾಶ್ ಲೆಸ್ ವ್ಯವಹಾರ ನಡೆಯತೊಡಗಿದೆ. ಇದಕ್ಕೆ ಸಾಕ್ಷಿಯೇನೆಂಬಂತೆ ವೇಶ್ಯಾವಾಟಿಕೆ ಅಡ್ಡೆಯೊಂದರಲ್ಲಿ ಸ್ವೈಪಿಂಗ್ ಮಷಿನ್ (ಪಿಓಎಸ್) ಇಟ್ಟು ವ್ಯವಹಾರ ನಡೆಸುತ್ತಿದ್ದ ಸಂಗತಿಯೊಂದು ಬೆಳಕಿಗೆ ಬಂದಿದೆ.

ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಎಲೆಕ್ಟ್ರಾನಿಕ್ ಸಿಟಿಯ ಆನಂದ್‍ರೆಡ್ಡಿ ಲೇಔಟ್‍ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕೆಲಸ ಕೊಡಿಸುವುದಾಗಿ ಹೇಳಿ ಬೆಂಗಳೂರಿಗೆ ಕರೆಸಿ ಅವರಿಗೆ ಹಣದ ಆಮಿಷ ತೋರಿಸಿ ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಉತ್ತರ ಪ್ರದೇಶದ ಅಲ್ಕಾ ಸಿಂಗ್ ಹಾಗೂ ಬೆಂಗಳೂರಿನ ನಹೀಂ ಬಂಧಿತರು.

ಪರಪ್ಪನ ಅಗ್ರಹಾರ ಪೊಲೀಸರ ದಾಳಿ ವೇಳೆ 3 ಸಾವಿರ ರೂ. ನಗದು, ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಸ್ವೈಪಿಂಗ್ ಮೆಷಿನ್, 5 ಮೊಬೈಲ್ ಫೋನ್ ಹಾಗೂ 2 ದ್ವಿಚಕ್ರವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin