ವೇಶ್ಯಾವಾಟಿಕೆ : ಮೂವರು ಸಿಸಿಬಿ ಬಲೆಗೆ

ಈ ಸುದ್ದಿಯನ್ನು ಶೇರ್ ಮಾಡಿ

pr
ಬೆಂಗಳೂರು,ಸೆ.28- ಮನೆಯೊಂದರಲ್ಲಿ ಯುವತಿಯರನ್ನಿಟ್ಟು ಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 16 ಸಾವಿರ ಹಣ, 4 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ತ್ಯಾಗರಾಜನಗರ ಠಾಣೆ ವ್ಯಾಪ್ತಿಯ 2ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಆ ಮನೆ ಮೇಲೆ ದಾಳಿ ಮಾಡಿ ಮೂವರನ್ನು ಬಂಸಿದ್ದಾರೆ.
ಆರೋಪಿಗಳ ವಿರುದ್ಧ ತ್ಯಾಗರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin