ವೇಶ್ಯಾವಾಟಿಕೆ : ಮೂವರ ಬಂಧನ ಯುವತಿಯರ ರಕ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

arrest

ಮೈಸೂರು,ನ.5-ನಗರ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಿಢೀರ್ ದಾಳಿ ಮಾಡಿ ಮೂವರನ್ನು ಬಂಧಿಸಿದ್ದು ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಲಕ್ಷ್ಮಿಕಾಂತ್‍ನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮಹೇಶ್(34), ರಾಕೇಶ್(24), ಅಣ್ಣಯ್ಯಪ್ಪ(30) ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ 3,100 ನಗದು, ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಲವು ತಿಂಗಳಿನಿಂದ ಈ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಈ ಮೂವರನ್ನು ಬಂಧಿಸಿದ್ದು, ನಗರದ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin