ವೈದ್ಯರಿಂದ ಬೆಳಗಾವಿ ಚಲೋ, ರೋಗಿಗಳಿಗೆ ಎದುರಾಗಲಿದೆಯೇ ಸಂಕಷ್ಟ..?

ಈ ಸುದ್ದಿಯನ್ನು ಶೇರ್ ಮಾಡಿ

dr-ravindra
ಚಿತ್ರದುರ್ಗ, ನ.11-ವೈದ್ಯಕೀಯ ಕಾಯ್ದೆ ತಿದ್ದುಪಡಿ ವಿರೋಧಿಸಿ 25 ಸಾವಿರಕ್ಕೂ ಹೆಚ್ಚು ವೈದ್ಯರು ಬೆಳಗಾವಿ ಚಲೋದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಐಎಂಎನ ರಾಜ್ಯಾಧ್ಯಕ್ಷ ಡಾ.ರವೀಂದ್ರ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವೈದ್ಯಕೀಯ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಈ ಹೋರಾಟ ನಡೆಸಲಾಗುತ್ತಿದೆ. ಸದನದಲ್ಲಿ ಚರ್ಚಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. 13ರಂದು ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ಮರು ದಿನದಿಂದಲೇ ಅನಿರ್ದಿಷ್ಟಾವಧಿ ಸರದಿ ಉಪವಾಸ ಸತ್ಯಾಗ್ರಹವನ್ನು ಕೂಡ ಮಾಡುವುದಾಗಿ ಡಾ.ರವೀಂದ್ರ ತಿಳಿಸಿದ್ದಾರೆ.

Facebook Comments

Sri Raghav

Admin