ವೈದ್ಯರ ಮೇಲೆ ಹಲ್ಲೆ : ಸಂಸದ ಹೆಗಡೆ ವಿರುದ್ಧ ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Anant-Kumar-Hegde1

ಶಿರಸಿ, ಜ.6- ವೈದ್ಯರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್‍ಕುಮಾರ್ ಹೆಗಡೆ ವಿರುದ್ಧ ಇಲ್ಲಿನ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ.  ಉತ್ತರ ಕನ್ನಡ ಸಂಸದ ಅನಂತ್‍ಕುಮಾರ್ ಹೆಗಡೆಯವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸಂಸದರು ಅವರನ್ನು ಟಿಎಸ್‍ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಅಲ್ಲಿದ್ದ ವೈದ್ಯರು ಇತರೆ ರೋಗಿಗಳನ್ನು ಪರಿಶೀಲಿಸುತ್ತಿದ್ದರು. ಹೀಗಾಗಿ ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರು ಕೆಂಡಾಮಂಡಲರಾಗಿ ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ಮಾಧ್ಯಮಗಳಲ್ಲಿ ಬಿತ್ತರಗೊಂಡು ಪ್ರಸಾರಗೊಂಡಿದ್ದಲ್ಲದೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬೆನ್ನಲ್ಲೆ ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಸಂಸದರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಹಲ್ಲೆ ಸಂಬಂಧ ವೈದ್ಯರು ಈವರೆಗೆ ಯಾವುದೇ ದೂರು ನೀಡಿಲ್ಲ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin