ವ್ಯಾಪಾರಿಯನ್ನು ಅಪಹರಿಸಿ ಶಿರಾಡಿಘಾಟ್‍ನಲ್ಲಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Shiradi-Ghat--02

ಮಡಿಕೇರಿ, ಫೆ.24- ಸೋಮವಾರಪೇಟೆ ಮೂಲದ ಪೀಠೋಪಕರಣ ವ್ಯಾಪಾರಿಯೊಬ್ಬನನ್ನು ಅಪಹರಿಸಿ ಶಿರಾಡಿಘಾಟ್‍ನಲ್ಲಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹೇಶ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಇವರನ್ನು ಕೊಲೆ ಮಾಡಿದ ಆರೋಪದ ಮೇಲೆ ರಘು, ಕಿರಣ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.  ಘಟನೆ ವಿವರ: ಮಹೇಶ್ ಅವರು ಸೋಮವಾರಪೇಟೆಯಲ್ಲಿ ಪೀಠೋಪಕರಣಗಳ ಅಂಗಡಿ ಹೊಂದಿದ್ದರು. ರಾಜ್ಯದ ವಿವಿಧೆಡೆಗಳಿಗೆ ಉತ್ಪನ್ನಗಳನ್ನು ಮಾರಾಟ ಮಾಡಿ ಒಳ್ಳೆಯ ಉದ್ಯಮಿ ಎನಿಸಿಕೊಂಡಿದ್ದರು. ಇತ್ತೀಚೆಗೆ ಅವರು ನಿಗೂಢವಾಗಿ ನಾಪತ್ತೆಯಾದಾಗ ಕುಟುಂಬದ ಸದಸ್ಯರು ಚಿಂತೆಗೀಡಾಗಿದ್ದರು. ಈ ಸಂಬಂಧ ಪೊಲೀಸರಿಗೂ ದೂರು ನೀಡಲಾಗಿತ್ತು.

ವಿಚಾರಣೆ ನಡೆಸಿದ ಪೊಲೀಸರು ಮಹೇಶ್ ಅವರ ಬಳಿ ಕೆಲಸ ಮಾಡುತ್ತಿದ್ದವರ ಬಗ್ಗೆ ಮಾಹಿತಿ ಕಲೆ ಹಾಕಿ ಕೆಲವರನ್ನು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಿದಾಗ ಕೊಲೆ ನಡೆದಿರುವುದು ಖಚಿತವಾಗಿದೆ.  ವಿಚಿತ್ರವೆಂದರೆ, ಆರೋಪಿಗಳೇ ಪೊಲೀಸರಿಗೆ ಶರಣಾಗಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾಡಿಘಾಟ್‍ನಲ್ಲಿ ರಾತ್ರಿಯಿಡೀ ಹುಡುಕಾಟ ನಡೆಸಿ ಶವವನ್ನು ಪತ್ತೆ ಹಚ್ಚಲಾಗಿದೆ. ಹಣಕಾಸು ವಿಷಯವಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin