ಶಬರಿಮಲೆಯಲ್ಲಿ ಕಾಲ್ತುಳಿತ : 25 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Shabarimale-01

ಶಬರಿಮಲೆ. ಡಿ.25 : ಕೇರಳದ ಪ್ರಸಿದ್ಧ ಅಯ್ಯಪ್ಪ ದೇಗುಲ ಶಬರಿಮಲೆಯಲ್ಲಿ ಭಾನುವಾರ ಸಂಭವಿಸಿದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ 25 ಮಂದಿಗೆ ಗಾಯಗಳಾಗಿವೆ.  ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯಿರುವ ಮಲಿಕಾಪುರಂ ದೇಗುಲದ ಬಳಿ, ಪ್ರಸಾದ ತಯಾರಿಸುವ ಘಟಕದ ಬಳಿ ಕಾಲ್ತುಳಿತ ಸಂಭವಿಸಿದೆ. ಗಾಯಗೊಂಡವರನ್ನು ಪಂಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲ್ತುಳಿತಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯಕ್ಕೆ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಗಾಯಗೊಂಡ ಹೆಚ್ಚಿನವರು ಹೊರರಾಜ್ಯದವರು ಎಂದು ತಿಳಿದುಬಂದಿದೆ.

ಮಕರ ಪೂಜೆ ನಿಮಿತ್ತ ಸ್ವಾಮಿ ಅಯ್ಯಪ್ಪ ಸ್ವಾಮಿಗೆ ಇಂದು ಸಂಜೆ “ತಂಗ ಅಂಗಿ” ಎಂಬ ವಿಶೇಷ ಪೂಜೆ ಮತ್ತು ಮೆರವಣಿಗೆ ಮಾಡುವ ಸಂದರ್ಭದಲ್ಲಿ ದೇವರ ದರ್ಶನ ಪಡೆಯಲು ಭಕ್ತರು ಮುಂದಾಗಿದ್ದರಿಂದ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತವಾಗಿದೆ ಎನ್ನಲಾಗಿದ್ದು, ಈ ವೇಳೆ ಸುಮಾರು 25ಕ್ಕೂ ಅಧಿಕ ಮಂದಿ ಭಕ್ತರು ಗಾಯಗೊಂಡಿದ್ದು, ಈ ಪೈಕಿ ಇಬ್ಬರು ಭಕ್ತರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

2011ರಲ್ಲಿ ಮಕರ ಜ್ಯೋತಿ ವೀಕ್ಷಿಣೆ ವೇಳೆ ಸಂಭವಿಸಿದ್ದ ಭೀಕರ ಕಾಲ್ತುಳಿತದ ವೇಳೆ 106 ಭಕ್ತರು ಸಾವನ್ನಪ್ಪಿ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin