ಶರತ್ ಮಡಿವಾಳ ಕೊಲೆ ಆರೋಪಿಗಳ ಬಂಧಿಸುವಲ್ಲಿ ಸರ್ಕಾರ ಮೀನಾಮೇಷ : ಬಿಜೆಪಿ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

BJP-Protest

ಬೆಂಗಳೂರು, ಜು.12- ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಮೀನಾಮೇಷ ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ರಮಾನಾಥ ರೈ ನಿಜವಾದ ಅಂಜುಬುರುಕರು ಎಂದು ಬಿಜೆಪಿ ಶಾಸಕ ವಿಜಯ್‍ಕುಮಾರ್ ಆರೋಪಿಸಿದ್ದಾರೆ.  ಶರತ್ ಮಡಿವಾಳ ಎಂಬ ಯುವಕನನ್ನು ಕೆಎಫ್‍ಡಿ, ಟಿಎಫ್‍ಐ, ಎಸ್‍ಟಿಪಿಐ ಸಂಘಟನೆಗೆ ಸೇರಿದ ಕಾರ್ಯಕರ್ತರು ಕೊಲೆ ಮಾಡಿದ್ದಾರೆ. ಅವರನ್ನು ಬಂಧಿಸಿದರೆ ಅಲ್ಪ ಸಂಖ್ಯಾತರು ಮುನಿಸಿ ಕೊಳ್ಳಬಹುದು ಎಂಬ ಭೀತಿ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರಿಗಿದೆ ಎಂದು ಅವರು ದೂರಿದರು.
ನಗರದ ಮೌರ್ಯ ವೃತ್ತದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ಕೊಲೆ ಪ್ರಕರಣ ಖಂಡಿಸಿ ನಗರದ ಬಿಜೆಪಿ ಘಟಕದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.ಸಂಸದೆ ಶೋಭಾ ಕರಂದ್ಲಾಜೆ ನಾವೇನೂ ಷಂಡರಲ್ಲ ಎಂದು ಹೇಳಿರುವ ಬಗ್ಗೆ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ನಾನು ಹೇಳುತ್ತೇನೆ. ರಾಜ್ಯದಲ್ಲಿ ಷಂಡ ಸರ್ಕಾರವಿದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದು ಹರಿಹಾಯ್ದರು. ದಯವಿಟ್ಟು ಅಲ್ಪ ಸಂಖ್ಯಾತರನ್ನು ಓಲೈಸುವ ಜಪ ಬಿಟ್ಟು ಆರ್‍ಎಸ್‍ಎಸ್ ಕಾರ್ಯಕರ್ತನ ಕೊಲೆಯಲ್ಲಿ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿ ಅಂತಹ ಸಮಾಜಘಾತುಕ ಶಕ್ತಿಗಳನ್ನು ಬಗ್ಗು ಬಡಿಯಬೇಕು. ನಾವು ಮುಸ್ಲಿಮರನ್ನು ಓಲೈಸಿದರೆ ಹಿಂದೂಗಳು ಕೂಡ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

 

ನೀವೇನು ಕಡಿದು ಕಟ್ಟೆ ಹಾಕಿದ್ದೀರಿ: ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ, ಪ್ರತಿಯೊಂದು ಘಟನೆಗೂ ಸಿದ್ದರಾಮಯ್ಯ ಅವರು ಕೇಂದ್ರದತ್ತ ಬೊಟ್ಟು ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಎಲ್ಲದಕ್ಕೂ ಕೇಂದ್ರವೇ ಹೊಣೆಯಾದರೆ ನೀವು ಏನು ಕಡಿದು ಕಟ್ಟೆ ಹಾಕಿದ್ದೀರಿ ಎಂದು ಪ್ರಶ್ನಿಸಿದರು.
ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವುದು ರಾಜ್ಯ ಸರ್ಕಾರಗಳ ಕರ್ತವ್ಯ. ಗೃಹ ಇಲಾಖೆ ನಿಮ್ಮ ಅಧೀನದಲ್ಲೇ ಕೆಲಸ ಮಾಡುತ್ತಿದೆ. ನಿಮಗೆ ಆಡಳಿತ ನಡೆಸುವ ಯೋಗ್ಯತೆ ಇಲ್ಲದಿದ್ದರೆ ಸಿದ್ದರಾಮಯ್ಯನ ಹುಂಡಿಯ ಗುಂಡಿಗೆ ಹೋಗಿ ಬೀಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಅಲ್ಪಸಂಖ್ಯಾತರನ್ನು ಮುಟ್ಟಿದರೆ ಚುನಾವಣೆಯಲ್ಲಿ ಮತ ಬರುವುದಿಲ್ಲ ಎಂಬ ಕಾರಣಕ್ಕಾಗಿ ದೇಶ ಭಕ್ತ ಹಿಂದೂ ಯುವಕರನ್ನು ಗುರಿಯಾಗಿಟ್ಟುಕೊಂಡು ಸುಳ್ಳು ಮೊಕದ್ದಮೆ ದಾಖಲಿಸಿದ್ದೀರಿ. ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಬಂಧಿಸುವಂತೆ ಪೊಲೀಸರಿಗೆ ಸೂಚನೆ ಕೊಡುತ್ತೀರಿ. ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಗಳು ಯಾವ ಸಂಘಟನೆಯವರೆಂದು ನಿಮಗೆ ಗೊತ್ತಿದೆ. ಯಾವ ಪುರುಷಾರ್ಥಕ್ಕೆ ಅವರನ್ನು ಓಲೈಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಬ್ಬ ಶರತ್ ಮಡಿವಾಳನನ್ನು ಹತ್ಯೆಗೈದರೆ ನಮ್ಮ ಸಂಘಟನೆಯನ್ನು ಬಗ್ಗು ಬಡಿಯಲು ಸಾಧ್ಯವಿಲ್ಲ. ಇನ್ನೂ ಸಾವಿರಾರು ದೇಶಭಕ್ತರು ಪ್ರಾಣ ಕೊಡಲು ಸಿದ್ಧರಿದ್ದಾರೆ. ಮೂಲಭೂತ ಸಂಘಟನೆಗಳನ್ನು ನಿಷೇಧಿಸದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ರಾಜ್ಯ ಸರ್ಕಾರ ತಕ್ಷಣವೇ ಜಿಲ್ಲೆಯಲ್ಲಿ ನಡೆದಿರುವ ಕೋಮು ಗಲಭೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‍ಐಎ) ಒಪ್ಪಿಸಬೇಕು. ವಿನಾಕಾರಣ ಹಿಂದೂ ಯುವಕರಿಗೆ ಕಿರುಕುಳ ಕೊಡುವುದನ್ನು ತಪ್ಪಿಸಬೇಕು. ಮೂಲಭೂತವಾದಿ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯಿಸಿದರು.  ಶಾಸಕರಾದ ರವಿ ಸುಬ್ರಹ್ಮಣ್ಯ, ಮುನಿರಾಜು, ರಘು ಬೆಂಗಳೂರು ನಗರ ಘಟಕದ ಅಧ್ಯಕ್ಷ ಸದಾಶಿವ, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ, ಪಾಲಿಕೆ ಸದಸ್ಯ ಉಮೇಶ್ ಶೆಟ್ಟಿ, ಬಿಜೆಪಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin